ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ವಲಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ 2023-24 ನೇ ಸಾಲಿನ ವೈದ್ಯಕೀಯ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ವಲಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ 2023-24 ನೇ ಸಾಲಿನ ವೈದ್ಯಕೀಯ ವೆಚ್ಚ. ಮರುಪಾವತಿಗೆ ಸಂಬಂಧಿಸಿದಂತೆ ರೂ. 65.12 ಕೋಟಿಗಳ ಅನುದಾನ ಬಿಡುಗಡೆ ಕೋರಿ ಉಲ್ಲೇಖ(2)ರ ಅನ್ವಯ ಈ ಕಛೇರಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗಿ ಈ ಕೆಳಕಂಡ ಅಂಶಗಳೊಂದಿಗೆ ಪೂರ್ಣ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಉಲ್ಲೇಖ(1)ರ ಪತ್ರದಲ್ಲಿ ತಿಳಿಸಲಾಗಿರುತ್ತದೆ.
2022-23ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಒಟ್ಟಾರೆ ರೂ. 11664.00 ಲಕ್ಷಗಳ ಅನುದಾನವನ್ನು ಹೆಚ್ಚುವರಿಯಾಗಿ ಒದಗಿಸಿ ಬಿಡುಗಡೆ ಮಾಡಲಾಗಿದೆ. ಆದರೆ, 2023-24ನೇ ಸಾಲಿಗೆ ಒಟ್ಟು ರೂ. 65.12 ಕೋಟಿಗಳ ಹೆಚ್ಚುವರಿ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ. ಆದ್ದರಿಂದ ವಾಸ್ತವಾಂಶಗಳ ಹಿನ್ನಲೆಯಲ್ಲಿ ಪ್ರಸ್ತಾವನೆಯನ್ನು ಮರು ಪರಿಶೀಲಿಸುವಂತೆ ಕೋರಿದೆ.
ವೈದ್ಯಕೀಯ ವೆಚ್ಚಕ್ಕಾಗಿ ಕೋರಲಾಗಿರುವ ರೂ 65.12 ಕೋಟಿಗಳ ಅನುದಾನ ಕೋರಿಕೆಯ ಜಿಲ್ಲಾ ಮತ್ತು ತಾಲ್ಲೂಕು ವಲಯಗಳ ಬೇಡಿಕೆ ಪ್ರಸ್ತಾವನೆಯ ಮಾಹಿತಿಗಳನ್ನು ಪಡೆದು, 2022-23ನೇ ಸಾಲಿನಲ್ಲಿ ಬಿಡುಗಡೆ ಮಾಡಲಾಗಿರುವ ಜಿಲ್ಲಾ ಮತ್ತು ತಾಲ್ಲೂಕು ವಲಯ ಬೇಡಿಕೆಗಳ ಪ್ರಸ್ತಾವನೆಯನ್ನು ಪುನರ್ ಪರಿಶೀಲಿಸಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಇವರು ದೃಢೀಕರಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವುದು.
2022-23ನೇ ಸಾಲಿನಲ್ಲಿ ವೈದ್ಯಕೀಯ ವೆಚ್ಚಕ್ಕಾಗಿ ಬಿಡುಗಡೆ ಮಾಡಲಾಗಿರುವ ಅನುದಾನ ಮತ್ತು ಈ ಅನುದಾನಕ್ಕೆದುರಾಗಿ ವೆಚ್ಚವಾಗಿರುವ ಮಾಹಿತಿಯನ್ನು ಜಿಲ್ಲಾ/ತಾಲ್ಲೂಕುವಾರು ಮಾಹಿತಿ ಒದಗಿಸುವುದು.