ಮಂಡ್ಯ : ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಖರೀದಿಸಿದ ರಾಗಿಯ ಹಣ ಪಾವತಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕಿನ ವಿವಿಧ ಗ್ರಾಮಗಳ ರೈತರು ತಾಲೂಕು ಕಛೇರಿ ಮುಂದೆ ಸೋಮವಾರ ಪ್ರತಿಭಟನೆ ಮಾಡಿದರು.
ತಾಲೂಕು ಕಛೇರಿಯ ಮುಂದೆ ಜಮಾಯಿಸಿದ ವಿವಿಧ ಗ್ರಾಮಗಳ ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಉದ್ದೇಶಿಸಿ ರೈತ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಮದ್ದೂರು ತಾಲೂಕಿನ ನೂರಾರು ರೈತರು ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿ ನಾಲ್ಕೈದು ತಿಂಗಳಾದರೂ ಹಣ ಪಾವತಿ ಮಾಡಿಲ್ಲ. ರಾಗಿ ಖರೀದಿ ಹಣ ಅಂದಾಜು 250 ರಿಂದ 300 ಕೋಟಿ ರೂಗಳನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಮುಂಗಾರು ಹಂಗಾಮಿಗೆ ರೈತರು ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಚಟುವಟಿಕೆ ಹಾಗೂ ಜೀವನ ನಿರ್ವಹಣೆಗೆ ಸಾಕಷ್ಟು ಕಷ್ಟ ಸಾಧ್ಯವಾಗುತ್ತಿದ್ದು, ಹೀಗಾಗಿ ಆದಷ್ಟು ಬೇಗ ಹಣ ಪಾವತಿ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಇನ್ನೋಂದು ವಾರದೊಳಗೆ ರಾಗಿ ಖರೀದಿ ಹಣ ಪಾವತಿ ಮಾಡಬೇಕು ಇಲ್ಲದಿದ್ದರೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಇದೇ ವೇಳೆ ಸೋ.ಶಿ.ಪ್ರಕಾಶ್, ಪ್ರಭುಲಿಂಗ, ವೆಂಕಟೇಶ್, ಮಂಜೇಶ್, ರಾಮೇಗೌಡ, ಉಮೇಶ್, ಗೌಡಯ್ಯ, ರಮೇಶ್, ನಿಂಗೇಗೌಡ, ರಾಜೇಶ್ ಹಾಗೂ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಬ್ರಿಡ್ಜ್ ಮೇಲಿನಿಂದ ಪತಿ ನದಿಗೆ ತಳ್ಳಿದ ಪ್ರಕರಣಕ್ಕೆ ಟ್ವಿಸ್ಟ್: ಬಾಲ್ಯವಿವಾಹವಾದ ತಾತಪ್ಪ ವಿರುದ್ಧ ‘FIR’ ದಾಖಲು
ನಾಳೆ ನಟ ದರ್ಶನ್ ಅಂಡ್ ಗ್ಯಾಂಗ್ ಪಾಲಿಗೆ ಬಿಗ್ ಡೇ: ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ತೀರ್ಪಿನತ್ತ