ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದ್ದು, ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಹೊಸ ವರ್ಷಾಚರಣೆಗೆ ಬಾರ್ ಹಾಗೂ ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಮಾರುಕಟ್ಟೆಯಲ್ಲಿ ಈಗಾಗಲೇ ವಿಶೇಷ ಮಾಸ್ಕ್ ಬಿಡುಗಡೆಯಾಗಿದೆ. ಆದ್ದರಿಂದ ಮದ್ಯ ಪ್ರಿಯರು ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ನಗರದಲ್ಲಿ ಮಾಸ್ಕ್ ಕಡ್ಡಾಯಕ್ಕೆ ಪಬ್, ಬಾರ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಬಾರ್, ಪಬ್ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ಬಂದಿದೆ, ಬರುವ ಗ್ರಾಹಕರಿಗೆ ಆ ಮಾಸ್ಕ್ಗಳನ್ನು ನೀಡಬೇಕು. ಇದರಿಂದ ಯಾರಿಗೂ ತೊಂದರೆಯಾಗೋದಿಲ್ಲ. ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.
ಇನ್ನೂ, ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್ ಅಶೋಕ್ ನಿನ್ನೆ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸ್ವಯಂ ಪ್ರೇರಿತವಾಗಿ ಮೂರನೇ ಡೋಸ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. . ಇದೇ ವೇಳೆ ಹೊರದೇಶದವರನ್ನು ರ್ಯಾಂಡಮ್ ರೀತಿಯಲ್ಲಿ ಟೆಸ್ಟ್ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು ಯಾವ ಚಟುವಟಿಕೆಗಳಿಗೆ ನಾವು ನಿರ್ಬಂದ ಮಾಡಿಲ್ಲ ಅಂತ ಹೇಳಿದರು. ಯಾವುದೇ ರಾಜಕೀಯ ಕಾರ್ಯಕ್ರಮಗಳಿಗೆ ನಿಶೇಧವನ್ನು ಹೇರಿಲ್ಲ, ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗುವುದು ಅಂತ ಇತ್ತೀಚೆಗೆ ಹೇಳಿದ್ದಾರೆ.
ಕೋವಿಡ್ ಗಾಗಿ ‘ಕಿಮ್ಸ್’ ಆಸ್ಪತ್ರೆಯಲ್ಲಿ 60 ಸಾವಿರ ಹಾಸಿಗೆ ಮೀಸಲು : ಸಚಿವ ಸುಧಾಕರ್