ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ.
ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಸಿತು.
ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ಇದೇ ಕೇಸ್ ಸಂಬಂಧದ ಎರಡು ಆದೇಶಗಳನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ. ಆ ಎರಡು ಅರ್ಜಿಗಳ ವಿಚಾರಣೆಯನ್ನು ಡಿಸೆಂಬರ್.5ಕ್ಕೆ ಮುಂದೂಡಲಾಗಿದೆ. ಹೀಗಾಗಿ ಈ ಅರ್ಜಿಯನ್ನು ಡಿಸೆಂಬರ್.9ಕ್ಕೆ ಮುಂದೂಡಲು ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ಮನವಿ ಮಾಡಿದರು.
ಆದರೇ ವಿಚಾರಣೆ ಮುಂದೂಡದಂತೆ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ ರಾಘವನ್ ಮನವಿ ಮಾಡಿದರು. ಮೇಲ್ಮನವಿ ವಿಚಾರಣೆಯಾದಂತ ಈ ಕೇಸ್ ವಿಚಾರಣೆ ಮುಂದೂಡಲು ನಾವು ಒಪ್ಪಿಲ್ಲ. ಮೇಲ್ಮನವಿಗೂ ಈ ಕೇಸ್ ವಿಚಾರಣೆಗೂ ಸಂಬಂಧವಿಲ್ಲ. ಹೀಗಾಗಿ ವಿಚಾರಣೆ ಮುಂದೂಡದಂತೆ ಮನವಿ ಮಾಡಿದರು.
ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿದ್ದಂತ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್.10ಕ್ಕೆ ಮುಂದೂಡಿದೆ. ಈ ಮೂಲಕ ಮುಡಾ ಕೇಸಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ.
ಅಂದಹಾಗೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೆ ಪತ್ನಿ ಪಾರ್ವತಿ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲಿಕ ದೇವರಾಜು ಅವರು ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರು ಕಳಾದಂತಹ ನಟೇಶ್ ಹಾಗೂ ದಿನೇಶ್ ಕುಮಾರ್ ಅವರನ್ನು ಕೂಡ ಲೋಕಾಯುಕ್ತ ಗ್ರಿಲ್ ನಡೆಸಿತ್ತು. ಅಲ್ಲದೆ ಇಡಿ ಅಧಿಕಾರಿಗಳು ಕೂಡ ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದರು.
ಸರ್ಕಾರಿ ಮಹಿಳಾ ನೌಕರರಿಗೆ ‘CCL ರಜೆ’ ಕುರಿತು ಹೈಕೋರ್ಟ್ ಮಹತ್ವ ತೀರ್ಪು
BIG NEWS: ರಾಜ್ಯದಲ್ಲಿ ಇನ್ನೂ ಜೀವಂತ ‘ಬಹಿಷ್ಕಾರ ಪದ್ದತಿ’: ಇವರನ್ನು ಮಾತಾಡಿಸಿದ್ರೆ 5,000 ದಂಡವಂತೆ