ಬೆಂಗಳೂರು: ಕರ್ನಾಟಕಕ್ಕೆ ಮತ್ತೆ ಬಿಗ್ ರಿಲೀಫ್ ಅನ್ನು CWRC ನೀಡಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ಸಂಬಂಧ ಯಾವುದೇ ಆದೇಶವನ್ನು ಮಾಡಿಲ್ಲ.
ದಿನಾಂಕ: 13-08-2024ರ ಇಂದು CWRCಯ 101ನೇ ಸಭೆ ದೆಹಲಿಯ ಕಚೇರಿಯಲ್ಲಿ ನಡೆಯಿತು. ಅದರ ಸಾರಾಂಶ ಈ ಕೆಳಗಿನಂತಿದೆ.
1. ಕರ್ನಾಟಕವು CWRC ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು
i) ದಿನಾಂಕ 11.08.2024 ರಂತೆ ನಿಗದಿಪಡಿಸಿದ ನೀರಿನ ಹರಿವಾದ 56.73 ಟಿಎಂಸಿ ಗೆ ಬದಲಾಗಿ ಬಿಳಿಗುಂಡ್ಲುವಿನಲ್ಲಿ 153.802 ಟಿಎಂಸಿ ನೀರು ಹರಿದಿರುತ್ತದೆ.
ii) ಬಿಳಿಗುಂಡ್ಲುವಿನಲ್ಲಿ ಹರಿದ ಹೆಚ್ಚುವರಿ ನೀರಿನ ಪ್ರಮಾಣವನ್ನು ಮುಂಬರುವ ತಿಂಗಳುಗಳಲ್ಲಿ ಕರ್ನಾಟಕ ರಾಜ್ಯವು ಹರಿಸಬೇಕಾದ ನೀರಿನ ಮೊತ್ತಕ್ಕೆ ಜಮೆ ಮಾಡಿಕೊಳ್ಳತಕ್ಕದ್ದು.
iii) ಮುಂದಿನ ಮಾನ್ಸೂನ್ ತಿಂಗಳುಗಳಲ್ಲಿಯೂ ಸಹ ಒಳ್ಳೆಯ ಮಳೆಯ ನಿರೀಕ್ಷೆ ಇದ್ದು, ಎರಡೂ ರಾಜ್ಯದ ರೈತರು ಸಹ ಲಾಭ ಪಡೆದುಕೊಳ್ಳಬಹುದೆಂದು ಆಶಿಸುತ್ತೇವೆ.
2. ತಮಿಳುನಾಡು ರಾಜ್ಯವು ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು
i) ಬಿಳಿಗುಂಡ್ಲುವಿನಲ್ಲಿ ಹರಿದ ನೀರಿನ ಪ್ರಮಾಣವು ಕರ್ನಾಟಕದ ಜಲಾಶಯಗಳಲ್ಲಿನ ಹೆಚ್ಚುವರಿ ನೀರಿನ ಪ್ರಮಾಣವಾಗಿರುತ್ತದೆ. ಈ ಬಾರಿಯೂ ಸಹ ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ತುಂಬಿದ ನಂತರವಷ್ಟೇ ನೀರನ್ನು ಹರಿಸಿರುತ್ತದೆ.
ii) ದಿನಾಂಕ: 03.04.1992 ರ ಕಾವೇರಿ ನ್ಯಾಯಾಧಿಕರಣದ ಆದೇಶದಂತೆ ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ, ಅದನ್ನು ಮುಂಬರುವ ವಾರಗಳಲ್ಲಿ ಹರಿಸತಕ್ಕದ್ದು. ಆದ್ದರಿಂದ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವವರೆಗೆ ನಿರೀಕ್ಷಿಸಿ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ.
3. ಕಾವೇರಿ ಜಲ ನಿಯಂತ್ರಣ ಸಮಿತಿಯಲ್ಲಿ (CWRC) ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಅಂತಿಮವಾಗಿ ಯಾವುದೇ ರೀತಿಯ ನಿರ್ಣಯಗಳು/ಆದೇಶಗಳು ಉಲ್ಲೇಖವಾಗಲಿಲ್ಲ; ಹೀಗೆ ಸಭೆಯು ಮುಕ್ತಾಯಗೊಂಡಿತು.
ಈ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ಕಾವೇರಿ ಜಲ ನಿಯಂತ್ರಣ ಸಮಿತಿಯು ಯಾವುದೇ ಆದೇಶ ಮಾಡದ ಕಾರಣ ರಿಲೀಫ್ ಸಿಕ್ಕಂತೆ ಆಗಿದೆ.
BIG UPDATE: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್: ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ
ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ