ಬೆಂಗಳೂರು:ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಭಾರೀ ಸ್ಫೋಟವನ್ನು ಖಂಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ 10 ಮಂದಿ ಗಾಯಗೊಂಡ ಘಟನೆಯ ಬಗ್ಗೆ ಎನ್‌ಐಎ ತನಿಖೆಗೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಗಂಭೀರವಾಗಿ ಪರಿಗಣಿಸಿದ್ದರೆ ಸ್ಫೋಟದ ಘಟನೆಯನ್ನು ತಪ್ಪಿಸಬಹುದಿತ್ತು ಎಂದರು.
ಶುಕ್ರವಾರ ಮಾತನಾಡಿದ ಜೋಶಿ, “ರಾಜ್ಯದ ಕಾಂಗ್ರೆಸ್ ಸರ್ಕಾರವು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ” ಎಂದು ಹೇಳಿದರು.
ಬೆಂಗಳೂರಲ್ಲಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಓರ್ವ ಶಂಕಿತನನ್ನು ವಶಪಡಿಸಿಕೊಂಡ ಪೊಲೀಸರು
“ವಿಧಾನಸೌಧದಲ್ಲಿ ನಡೆದ ಆ ಘಟನೆಗೆ ರಾಜ್ಯ ಸರ್ಕಾರ ಪ್ರತಿಕ್ರಿಯಿಸಿದ ರೀತಿ “ಸಿಲ್ಲಿ” ಮತ್ತು ಇಡೀ ಘಟನೆಗೆ “ಸಾಂದರ್ಭಿಕ ಪ್ರತಿಕ್ರಿಯೆ” ನೀಡಲಾಯಿತು. ಯಾವಾಗ ತುಷ್ಟೀಕರಣದ ರಾಜಕೀಯ ಹೆಚ್ಚಾಯಿತೋ, ಆಗ ಆಮೂಲಾಗ್ರೀಕರಣ ಹೆಚ್ಚಾಗುತ್ತದೆ. ಭಯೋತ್ಪಾದನೆಯಾಗಿ ಪರಿವರ್ತನೆಯಾಗುತ್ತದೆ ಎಂದು ಜೋಶಿ ಪ್ರತಿಪಾದಿಸಿದರು.
“ನಾವು ಈ ಸ್ಫೋಟವನ್ನು ಬಲವಾಗಿ ಖಂಡಿಸುತ್ತೇವೆ, ಎನ್‌ಐಎ ಈ ಬಗ್ಗೆ ತನಿಖೆ ನಡೆಸಬೇಕು ಮತ್ತು ರಾಜ್ಯ ಸರ್ಕಾರವು ಇದನ್ನು ಶಿಫಾರಸು ಮಾಡಬೇಕು. ತೀವ್ರಗಾಮಿಗಳಾಗಿರುವ ಜನರನ್ನು ಕಾಂಗ್ರೆಸ್ ಪ್ರೋತ್ಸಾಹಿಸುತ್ತದೆ ಮತ್ತು ಬೆಂಬಲಿಸುತ್ತದೆ, ಅದಕ್ಕಾಗಿಯೇ ಈ ಘಟನೆಗಳು ನಡೆಯುತ್ತಿವೆ” ಎಂದು ಕೇಂದ್ರ ಸಚಿವರು ಹೇಳಿದರು.
ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಯತ್ನಿಸುತ್ತಿದ್ದು, ಇದು ಸರಿಯಲ್ಲ, ಇದನ್ನು ರಾಜ್ಯದ ಜನತೆ ಸಹಿಸುವುದಿಲ್ಲ ಎಂದು ಜೋಶಿ ಹೇಳಿದರು.
ಏತನ್ಮಧ್ಯೆ, ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವು ವೈಟ್‌ಫೀಲ್ಡ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿತು.
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಡಿಜಿಪಿ ಅಲೋಕ್ ಮೋಹನ್ ಅವರೊಂದಿಗೆ ಬೆಂಗಳೂರು ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.