ಲಕ್ನೋ: ವ್ಯಕ್ತಿಯೊಬ್ಬ ತನ್ನ ತಾಯಿ, ಪತ್ನಿ ಮತ್ತು ಮೂವರು ಮಕ್ಕಳನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಪ್ಲಾಹಾಪುರ್ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
45 ವರ್ಷದ ಅನುರಾಗ್ ಸಿಂಗ್ ಮಾನಸಿಕವಾಗಿ ಅಸ್ಥಿರರಾಗಿದ್ದು, ಇದು ಘಟನೆಗೆ ಕಾರಣವಾಗಿರಬಹುದು ಎನ್ನಲಾಗಿದೆ.
ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ಮಾತನಾಡಿ, “ನಾವು ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಹೇಳಿದರು.
ಸಿಂಗ್ ತನ್ನ ತಾಯಿ ಸಾವಿತ್ರಿ ಸಿಂಗ್ (62), ಪತ್ನಿ ಪ್ರಿಯಾಂಕಾ (40), ಪುತ್ರಿಯರಾದ ಆಸ್ವಿ (12), ಅರ್ನಾ (8) ಮತ್ತು ಮಗ ಅದ್ವಿಕ್ (4) ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ.
ನಂತರ ಆತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಘಟಕಗಳನ್ನು ನಿಯೋಜಿಸಲಾಗಿದೆ.