Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: HDD ಬೇಸರ
KARNATAKA

ಕರ್ನಾಟಕ ಸೇರಿ ಕೆಲ ರಾಜ್ಯಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರ ಕಡೆಗಣನೆ: HDD ಬೇಸರ

By kannadanewsnow0905/08/2024 9:22 PM

ನವದೆಹಲಿ: ನವೀಕರಿಸಬಹುದಾದ ಇಂಧನ ಶಕ್ತಿಗಳ ಬಗ್ಗೆ ರಾಜ್ಯಸಭೆಯಲ್ಲಿ ಇಂದು ಮಹತ್ವದ ಭಾಷಣ ಮಾಡಿದ ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು, ಈ ಕ್ಷೇತ್ರವನ್ನು ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳು ಕಡೆಗಣಿಸುತ್ತಿದೆ ಎಂದು ಅತ್ಯಂತ ಬೇಸರದಿಂದ ಹೇಳಿದರು.

ರಾಜ್ಯಸಭೆಯಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದರು ಅವರು.

ಹಿಂದೆ ಕರ್ನಾಟಕ ರಾಜ್ಯವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ನಾಯಕತ್ವ ನೀಡಿತ್ತು. ಈ ಕ್ಷೇತ್ರದಲ್ಲಿ ಗಣನೀಯ ದಾಪುಗಾಲು ಇರಿಸಿತ್ತು. ಆದರೆ ಕೆಲ ವರ್ಷಗಳಿಂದ ಈಚೆಗೆ ಕರ್ನಾಟಕದಲ್ಲಿ ಈ ಕ್ಷೇತ್ರ ಗಣನೀಯವಾಗಿ ಹಿನ್ನೆಡೆ ಅನುಭವಿಸಿದೆ ಎಂದು ಅವರು ಹೇಳಿದರು.

ನಮ್ಮ ದೇಶದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಬೆಳವಣಿಗೆ ಪ್ರಮಾಣ ಶೇಕಡಾ 14ರಷ್ಟು ಇದ್ದು, ಕರ್ನಾಟಕ ರಾಜ್ಯದಲ್ಲಿ ಆ ಪ್ರಮಾಣ ಶೇಕಡಾ 2.58ರಷ್ಟು ಇದೆ. ಈ ಸಂದರ್ಭದಲ್ಲಿ ಈ ಕ್ಷೇತ್ರದ ಬೆಳವಣಿಗೆಯ ದರ ಕುಂಠಿತವಾಗಿರುವ ಬಗ್ಗೆ ಎಲ್ಲಾರೂ ಗಂಭೀರ ಚಿಂತನೆ ನಡೆಸಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ಮಾಡಿದರು.

ಈ ಕ್ಷೇತ್ರದಲ್ಲಿ ಉಂಟಾಗುವ ತ್ಯಾಜ್ಯ ವಸ್ತುಗಳ ಬಗ್ಗೆಯೂ ಮಹತ್ವದ ಸಲಹೆ ನೀಡಿದ ಮಾಜಿ ಪ್ರಧಾನಿಗಳು; ಸೋಲಾರ್‌ ಪ್ಯಾನೆಲ್‌ಗಳನ್ನು 25 ವರ್ಷಗಳ ಬಳಿಕ ವಿಲೇವಾರಿ ಮಾಡಲೇಬೇಕಾಗುತ್ತದೆ. ಅವುಗಳನ್ನು ವಿಲೇವಾರಿ ಮಾಡುವ ಬಗ್ಗೆ ನಮ್ಮ ದೇಶದಲ್ಲಿ ಯಾವುದೇ ರೀತಿಯ ವೈಜ್ಞಾನಿಕ ನೀತಿ ಇರುವುಲ್ಲ ಎಂದರು.

ಸೋಲಾರ್ ಪ್ಯಾನೆಲ್‌ಗಳ ವಿಲೇವಾರಿಯಲ್ಲಿ ನಾವು ಅತ್ಯಂತ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ, ಅವುಗಳ ವಿಲೇವಾರಿಗೆ ವೈಜ್ಞಾನಿಕ ನೀತಿ ರೂಪಿಸಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಪರಿಸರ ಸಂರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮಂ ಮೇಲೆ ಇದೆ. ನವೀಕರಿಸಬಹುದಾದ ಇಂಧನ ಶಕ್ತಿಯಿಂದ ನಮ್ಮ ಪರಿಸರ ಹಾಗೂ ಜೀವ ವೈವಿಧ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆಯೂ ಅತ್ಯಂತ ಮುನ್ನೆಚ್ಚರಿಕೆ ವಹಿಸಬೇಕು. ಸೋಲಾರ್ ಪ್ಯಾನೆಲ್‌ಗಳನ್ನು ಇದೀಗ ಕೃಷಿ, ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಳವಡಿಸಲಾಗುತ್ತಿದೆ. ಭವಿಷ್ಯದಲ್ಲಿ ಇವುಗಳನ್ನು ಕೃಷಿ ಯೋಗ್ಯವಲ್ಲದ ಪ್ರದೇಶಗಳಲ್ಲಿ ಅಳವಡಿಸಲು ಯೋಜನೆಗಳನ್ನು ರೂಪಿಸಬೇಕು ಎನ್ನುವುದು ನನ್ನ ಕಳಕಳಿಯ ಸಲಹೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಸದ್ಯದ ಸಂದರ್ಭದಲ್ಲಿ ನವೀಕರಿಸಬಹುದಾದ ಇಂಧನ ಶಕ್ತಿಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ನಾವು ಕೇವಲ ಇಷ್ಟನ್ನಷ್ಟೆ ಮಾಡಿದರೆ ಸಾಲದು. ಅವುಗಳ ಅಳವಡಿಕೆ, ಬಳಕೆ, ನಿರ್ವಹಣೆ ಪರಿಣಾಮಕಾರಿ ವ್ಯವಸ್ಥೆ ಅತ್ಯಗತ್ಯವಿದೆ. ಈ ಬಗ್ಗೆ ಸರ್ಕಾರ ಗಮನ ಕೊಡಬೇಕು ಎಂದು ಅವರು ಹೇಳಿದರು.

ನವೀಕರಿಸಬಹುದಾದ ಇಂಧನಕ್ಕೆ ಇನ್ನಷ್ಟು ಒತ್ತು ನೀಡಿ ಗ್ರಾಮೀಣ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ಸಮಗ್ರ ನೀತಿ ರೂಪಿಸಬೇಕು ಎಂದು ಮಾಜಿ ಪ್ರಧಾನಿಗಳು ಸಲಹೆ ಮಾಡಿದರು.

ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ

ವಿವಿಧ ಕ್ಷೇತ್ರಗಳಲ್ಲಿ ಪರಿಣಾಮಕಾರಿ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಕ ಅಭಿವೃದ್ಧಿ ಆಗಿದೆ. ಈ ಸರ್ಕಾರದ ವಿರುದ್ಧ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪ ಇಲ್ಲ ಎಂಬುದನ್ನು ನಾವು ಗಮನಿಸಬೇಕು ಎಂದು ಅವರು ಹೇಳಿದರು.

ಹಸಿರು, ಶುದ್ಧ ಇಂಧನದ ಅಗತ್ಯವಿದೆ

ಪರಿಸರ ರಕ್ಷಣೆ ಮಾಡಿಕೊಂಡು ಹಸಿರು ಹಾಗೂ ಶುದ್ಧ ಇಂಧನದ ಬಳಕೆಯಿಂದ ದೇಶದ ಸುಸ್ಥಿರ ಅಭಿವೃದ್ಧಿಯಾಗಲು ಸಾಧ್ಯ. ಇದಕ್ಕೂ ಮುನ್ನ ಜಲ ವಿದ್ಯುತ್‌, ಆ ನಂತರ ಸೌರ ವಿದ್ಯುತ್, ಪವನ ವಿದ್ಯುತ್‌ ಶಕ್ತಿಗಳಿಗೆ ಪ್ರೋತ್ಸಾಹ ಕೊಡಲಾಯಿತು. ಸದ್ಯದ ಸಂದರ್ಭದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಮಹತ್ವ ಕೊಡುವುದು ಹೆಚ್ಚಾಗಿದೆ. ನಮ್ಮ ದೇಶದಲ್ಲಿ ಈಗ 1000 ಗಿಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಈಚಿನ ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ 30 ಪಟ್ಟು ಹೆಚ್ಚಳವಾಗಿದೆ. ಆದರೂ, ಇಂಧನ ಕ್ಷೇತ್ರದಲ್ಲಿ ಕೆಲವೊಂದು ಆತಂಕಗಳು ಇದ್ದೇ ಇದೆ ಎಂಬುದನ್ನು ನಾವು ಮರೆಯಬಾರದು ಎಂದು ಮಾಜಿ ಪ್ರಧಾನಿಗಳು ಸವಿಸ್ತಾರವಾಗಿ ಹೇಳಿದರು.

ಇಡೀ ಜಗತ್ತಿನಲ್ಲಿಯೇ ಭಾರತವು ಇಂಧನ ಬಳಕೆಯಲ್ಲಿ 3ನೇ ಸ್ಥಾನದಲ್ಲಿದೆ. ಈಗಲೂ ಶೇಕಡಾ 80ರಷ್ಟು ಪಳೆಯುಳಿಕೆ ಇಂಧನಗಳನ್ನೇ ಬಳಸುತ್ತಿದ್ದೇವೆ. ನವೀಕರಿಸಬಹುದಾದ ಇಂಧನಗಳ ಪಾಲು ಶೇಕಡಾ 20ರಷ್ಟು ಮಾತ್ರ ಎಂದು ಟೆರಿ ವರದಿಯಲ್ಲಿ ಬೊಟ್ಟು ಮಾಡಿ ತೋರಿಸಲಾಗಿದೆ. 2050ರ ವೇಳೆಗೆ ಇಂಧನ ಬೇಡಿಕೆ ಪ್ರಮಾಣ ಶೇಕಡಾ 400ರಷ್ಟು ಹೆಚ್ಚಳವಾಗಲಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಈ ಸಲದ ಬಜೆಟ್‌ನಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ವಿಶೇಷ ಒತ್ತಾಸೆ ನೀಡಲಾಗಿದೆ ಎಂದರು ಅವರು.

ಹಲವಾರು ರಾಜ್ಯಗಳು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿವೆ ಎಂಬುದು ಗಮನಾರ್ಹ. ಇನ್ನು ಕೆಲ ರಾಜ್ಯಗಳಲ್ಲಿ ಈ ಕ್ಷೇತ್ರದ ಪ್ರಗತಿ ಏನೇನೂ ಸಾಲದು ಎನ್ನುವುದು ನನ್ನ ಅಭಿಪ್ರಾಯ. ಇಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸಲು ಗಮನ ಹರಿಸಬೇಕು ಎಂದು ಅವರು ಸಲಹೆ ಮಾಡಿದರು.

ಕೃಷಿ ಕ್ಷೇತ್ರದಲ್ಲಿ ರೈತರು ಅನುಭವಿಸುತ್ತಿರುವ ಕಷ್ಟಗಳ ಅರಿವು ನನಗಿದೆ. ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿದ್ದಾಗ ಕೃಷಿಕರ ಕಲ್ಯಾಣಕ್ಕೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾಗ ಗಂಗಾ ಕಲ್ಯಾಣ ಯೋಜನೆಯನ್ನು ನಾನೇ ಜಾರಿ ಮಾಡಿದೆ ಎಂದು ಮಾಜಿ ಪ್ರಧಾನಿಗಳು ನೆನಪು ಮಾಡಿಕೊಂಡರು.

ನೂತನ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆ: ಸಚಿವ ಪಾಟೀಲ್

ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್

ಪುರುಷರೇ ಎಚ್ಚರ : `ಶಿಶ್ನ ಕ್ಯಾನ್ಸರ್’ ನ ಆರಂಭಿಕ ರೋಗಲಕ್ಷಣಗಳ ಬಗ್ಗೆ ತಿಳಿಯಿರಿ!

Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM1 Min Read

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM2 Mins Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM1 Min Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

By kannadanewsnow0915/06/2025 9:40 PM KARNATAKA 1 Min Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಾಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ…

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.