ಬೆಂಗಳೂರು: ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್ ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವ ಕೆಲಸ ಮಾಡಿದ್ದರು.
ಸುಮಾರು 25. ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ದ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರು ಸಾಹಿತ್ಯ ಮತ್ತು ಪತ್ರಿಕಾ ರಂಗದಲ್ಲಿ ಸಲ್ಲಿಸಿದ ಸೇವೆಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.
ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ನೋವಾಯಿತು. ಭಾರತೀಯ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಟಿ.ಜೆ.ಎಸ್. ಜಾರ್ಜ್ ಅವರು ಅಂಕಣಕಾರರಾಗಿ ರಾಜಕೀಯ ವಿದ್ಯಮಾನಗಳ ವಿಶ್ಲೇಷಣೆ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸದಾ ಜಾಗೃತಗೊಳಿಸುವ ಕೆಲಸ… pic.twitter.com/fmo007nyDL
— Basavaraj S Bommai (@BSBommai) October 3, 2025