ಬೆಂಗಳೂರು: ವಯೋಸಹಜವಾಗಿ ಕನ್ನಡ ಖ್ಯಾತ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ( SL Bhyrappa ) ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರುಗಳು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಸಂತಾಪ
ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳನ್ನು ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.
ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.
ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. pic.twitter.com/D3y4Ep2H8J— Siddaramaiah (@siddaramaiah) September 24, 2025
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸಂತಾಪ
ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು.
ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ.
1/2 pic.twitter.com/XSd0oIC2ad— H D Devegowda (@H_D_Devegowda) September 24, 2025
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ
‘ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದಿದ್ದಾರೆ.
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದಿದ್ದಾರೆ.
'ಪರ್ವ' ಮತ್ತು 'ಉತ್ತರಕಾಂಡ' ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಸರಸ್ವತಿ ಸಮ್ಮಾನ ಪುರಸ್ಕೃತರು, ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ… pic.twitter.com/BX85Fj2hgt
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 24, 2025
ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಂತಾಪ
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ ಶ್ರೀ ಎಸ್.ಎಲ್.ಭೈರಪ್ಪ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದದ್ದು, ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ ಎಂದಿದ್ದಾರೆ.
ಭಗವಂತ ಭೈರಪ್ಪನವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಸ್ಥರು, ಅಭಿಮಾನಿಗಳು ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ ಶ್ರೀ ಎಸ್.ಎಲ್.ಭೈರಪ್ಪ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಸಾಹಿತ್ಯ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದದ್ದು, ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ.
ಭಗವಂತ ಭೈರಪ್ಪನವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಸ್ಥರು, ಅಭಿಮಾನಿಗಳು… pic.twitter.com/yZP26ORg91
— Dr. Sharan Prakash Patil (@S_PrakashPatil) September 24, 2025
ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಂತಾಪ
ಕನ್ನಡ ಸಾರಸ್ವತ ಲೋಕದ ಮೇರು ಲೇಖಕ, ತಮ್ಮ ಅನನ್ಯ ಕಾದಂಬರಿಗಳ ಮೂಲಕ ಜನಮಾನಸದಲ್ಲಿ ನೆಲೆಸಿದ್ದ ಶ್ರೇಷ್ಠ ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಹೇಳಿದ್ದಾರೆ.
ಬದುಕಿನ ನಿಷ್ಠುರ ಸತ್ಯಗಳನ್ನು ತಮ್ಮ ಬರಹಗಳಲ್ಲಿ ಅನಾವರಣಗೊಳಿಸಿದ ಅವರ ಬೌದ್ಧಿಕ ತಾಕತ್ತು ಯಾವತ್ತಿಗೂ ಶ್ಲಾಘನೀಯ. ಎಸ್ ಎಲ್ ಭೈರಪ್ಪನವರ ಆತ್ಮಕ್ಕೆ ಸದ್ಗತಿ ಸಿಗಲಿ, ಅವರು ಮತ್ತೊಮ್ಮೆ ಹುಟ್ಟಿಬರಲಿ. ಅಪಾರ ನೋವಿನಲ್ಲಿರುವ ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ನಾನೂ ಒಬ್ಬ ಎಂದಿದ್ದಾರೆ.
ಕನ್ನಡ ಸಾರಸ್ವತ ಲೋಕದ ಮೇರು ಲೇಖಕ, ತಮ್ಮ ಅನನ್ಯ ಕಾದಂಬರಿಗಳ ಮೂಲಕ ಜನಮಾನಸದಲ್ಲಿ ನೆಲೆಸಿದ್ದ ಶ್ರೇಷ್ಠ ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ಬದುಕಿನ ನಿಷ್ಠುರ ಸತ್ಯಗಳನ್ನು ತಮ್ಮ ಬರಹಗಳಲ್ಲಿ ಅನಾವರಣಗೊಳಿಸಿದ ಅವರ ಬೌದ್ಧಿಕ ತಾಕತ್ತು ಯಾವತ್ತಿಗೂ ಶ್ಲಾಘನೀಯ.
ಎಸ್ ಎಲ್ ಭೈರಪ್ಪನವರ… pic.twitter.com/0HhDCZZAQ4
— Santosh Lad Official (@SantoshSLadINC) September 24, 2025
ಮಾಜಿ ಸಚಿವ ಬಿ ಶ್ರೀರಾಮುಲು ಸಂತಾಪ
ಕನ್ನಡ ಸಾಹಿತ್ಯ ಲೋಕದ ಸರಸ್ವತಿ ಪುತ್ರನಿಂದೇ ಗುರುತಿಸಿಕೊಂಡಿದ್ದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀಯುತ ಎಸ್. ಎಲ್. ಭೈರಪ್ಪ ಅವರ ನಿಧನ ಸುದ್ದಿ ಕೇಳಿ ನಿಜಕ್ಕೂ ನನಗೆ ಆಘಾತವಾಗಿದೆ. ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಅಪಾರ ಸಂಖ್ಯೆಯ ಓದುಗರನ್ನು ಆಕರ್ಷಿಸುತ್ತಿದ್ದ ಅವರ ನಿಧನ ಇಡೀ ಭಾರತೀಯ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿದ್ದಾರೆ.
ಆವರಣ, ಕವಲು, ಯಾನ, ಉತ್ತರಕಾಂಡ, ಪರ್ವ, ವಂಶವೃಕ್ಷ, ಗೃಹಭಂಗ ಸೇರಿದಂತೆ ಅನೇಕ ಪ್ರಖ್ಯಾತ ಕಾದಂಬರಿಗಳನ್ನು ಬರೆದು ಓದುಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದ್ದ ಅವರಿಗೆ ಅವರೇ ಸರಿ ಸಾಟಿ! ಎಸ್ ಎಲ್ ಭೈರಪ್ಪ ನಂತಹ ಶ್ರೇಷ್ಠ ಸಾಹಿತಿಯನ್ನು ಕಳೆದುಕೊಂಡು ಬಡವಾಗಿರುವ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಲು ನನ್ನ ಬಳಿ ಪದಗಳೇ ಇಲ್ಲ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ನೀಡಲಿ. ಹಾಗೂ ಕುಟುಂಬದ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಸರಸ್ವತಿ ಪುತ್ರನಿಂದೇ ಗುರುತಿಸಿಕೊಂಡಿದ್ದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀಯುತ ಎಸ್. ಎಲ್. ಭೈರಪ್ಪ ಅವರ ನಿಧನ ಸುದ್ದಿ ಕೇಳಿ ನಿಜಕ್ಕೂ ನನಗೆ ಆಘಾತವಾಗಿದೆ.
ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲೂ ಅಪಾರ ಸಂಖ್ಯೆಯ ಓದುಗರನ್ನು ಆಕರ್ಷಿಸುತ್ತಿದ್ದ ಅವರ ನಿಧನ ಇಡೀ ಭಾರತೀಯ ಸಾಹಿತ್ಯ ಲೋಕಕ್ಕೆ… pic.twitter.com/HPDINwLOzS
— B Sriramulu (@sriramulubjp) September 24, 2025
ಸಚಿವ ಸತೀಶ್ ಜಾರಕಿಹೊಳಿ ಸಂತಾಪ
ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರರಾದ ಶ್ರೀ ಎಸ್. ಎಲ್. ಭೈರಪ್ಪ ಅವರ ನಿಧನ ಸುದ್ದಿ ನೋವುಂಟು ಮಾಡಿದೆ. ಮನಸ್ಸಿಗೆ ಹತ್ತಿರವಾಗಿರುವ ಬರಹಶೈಲಿಯಿಂದ ಲಕ್ಷಾಂತರ ಓದುಗರ ಹೃದಯದಲ್ಲಿ ಅಜರಾಮರವಾದ ಸ್ಥಾನ ಪಡೆದ ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟ. ಅವರ ಕುಟುಂಬವರ್ಗ ಹಾಗೂ ವಿಶ್ವದಾದ್ಯಂತ ಇರುವ ಓದುಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಹಿರಿಯ ಬರಹಗಾರರಾದ ಶ್ರೀ ಎಸ್. ಎಲ್. ಭೈರಪ್ಪ ಅವರ ನಿಧನ ಸುದ್ದಿ ನೋವುಂಟು ಮಾಡಿದೆ.
ಮನಸ್ಸಿಗೆ ಹತ್ತಿರವಾಗಿರುವ ಬರಹಶೈಲಿಯಿಂದ ಲಕ್ಷಾಂತರ ಓದುಗರ ಹೃದಯದಲ್ಲಿ ಅಜರಾಮರವಾದ ಸ್ಥಾನ ಪಡೆದ ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟ. ಅವರ ಕುಟುಂಬವರ್ಗ ಹಾಗೂ ವಿಶ್ವದಾದ್ಯಂತ ಇರುವ ಓದುಗರಿಗೆ ನನ್ನ… pic.twitter.com/zyFioji196
— Satish Jarkiholi (@JarkiholiSatish) September 24, 2025
ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಾಪ
ಕನ್ನಡದ ಅಗ್ರಗಣ್ಯ ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿಗಳಾಗಿದ್ದ ಪದ್ಮಭೂಷಣ ಶ್ರೀ ಎಸ್. ಎಲ್. ಭೈರಪ್ಪ ನವರ ನಿಧನದ ವಾರ್ತೆ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ತಮ್ಮ ಬರಹಗಳಲ್ಲಿ ವೈಚಾರಿಕತೆಯ ಮೆರುಗು ತುಂಬಿ ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಮೇಧಾವಿ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ತಿಳಿಸಿದ್ದಾರೆ.
ಕನ್ನಡದ ಅಗ್ರಗಣ್ಯ ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿಗಳಾಗಿದ್ದ ಪದ್ಮಭೂಷಣ ಶ್ರೀ ಎಸ್. ಎಲ್. ಭೈರಪ್ಪ ನವರ ನಿಧನದ ವಾರ್ತೆ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ.
ತಮ್ಮ ಬರಹಗಳಲ್ಲಿ ವೈಚಾರಿಕತೆಯ ಮೆರುಗು ತುಂಬಿ ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಮೇಧಾವಿ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿಗಳು. #SLBhyrappa pic.twitter.com/ddtpiHq0CS
— Araga Jnanendra (@JnanendraAraga) September 24, 2025