ಉಡುಪಿ: ರಾಜ್ಯದ ಖ್ಯಾತ ವೈದ್ಯ ಎ.ರಾಜಾ ಅವರು ವಯೋ ಸಹಯ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ನರರೋಗ ತಜ್ಞ ವೈದ್ಯ ಡಾ.ಎ ರಾಜಾ ಇನ್ನಿಲ್ಲವಾಗಿದ್ದಾರೆ.
ಡಾ.ಎ ರಾಜಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ
ಉಡುಪಿಯ ಮಣಿಪಾಲದ ಪ್ರಖ್ಯಾತ ನರರೋಗ ತಜ್ಞರಾಗಿದ್ದ ಡಾಕ್ಟರ್ ಎ ರಾಜಾ (73) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.
ಸುಮಾರು 30 ವರ್ಷ ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ 15 ವರ್ಷ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದ ಅವರು, ಸಾವಿರಾರು ರೋಗಿಗಳಿಗೆ ಉಪಚಾರ ಮಾಡಿದ್ದಾರೆ.
ಅಗಲಿದ ಆ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬ ವರ್ಗ ಮತ್ತು ಅಭಿಮಾನಿ ಬಳಗಕ್ಕೆ ಅವರ ಸಾವಿನ ನೋವಿನ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ