ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಅವರು ಈ ಪ್ರಕರಣದಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.30ಕ್ಕೆ ಕೋರ್ಟ್ ಮುಂದೂಡಿಕೆ. ಹೀಗಾಗಿ ನಟ ದರ್ಶನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ.
ಇಂದು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯವು ನಡೆಸಿತು. ಹಿರಿಯ ವಕೀಲರು ಬರಬೇಕಿರುವುದರಿಂದ ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. ಅಲ್ಲದೇ ದರ್ಶನ್ ಪರ ವಕೀಲರು ವಾದ ಮಂಡಿಸಲು ಕಾಲಾವಕಾಶ ಕೋರಿದ್ದರು. ಹೀಗಾಗಿ ಸೆಪ್ಟೆಂಬರ್.30ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ.
ಅಂದಹಾಗೇ ನಟ ದರ್ಶನ್ ಅಂಡ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧನಕ್ಕೆ ಒಳಗಾಗಿ ಬಳ್ಳಾರಿ ಜೈಲು ಪಾಲಾಗಿದ್ದಾರೆ. ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಗೆ ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಣೆ ಸಲ್ಲಿಸಲಾಗಿದೆ. ಹಿರಿಯ ವಕೀಲರು ವಾದ ಮಂಡನೆಗೆ ಬರಬೇಕಿದೆ. ಹೀಗಾಗಿ ಕಾಲಾವಕಾಶ ನೀಡುವಂತೆ ಕೋರಿದರು. ಜೊತೆಗೆ ದರ್ಶನ್ ಪರ ವಕೀಲರು ಪ್ರತಿವಾದ ಮಂಡಿಸಲು ಕಾಲಾವಕಾಶ ಕೋರಿದ್ದರಿಂದಾಗಿ ವಿಚಾರಣೆ ಮುಂದೂಡಿಕೆ ಮಾಡಿದೆ.