ದಾವಣಗೆರೆ : ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಮುಖ್ಯ ಕಾಲುವೆಯಲ್ಲಿ ಬಿದ್ದಿದೆ.
ಹೌದು. ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ನಾಪತ್ತೆ ಪ್ರಕರಣ ಸಂಬಂಧ ಪೊಲಿಸರು ಪರಿಶೀಲನೆ ನಡೆಸಿದಾಗ ತುಂಗಾ ಮುಖ್ಯ ಕಾಲುವೆಯಲ್ಲಿ ಚಂದ್ರಶೇಖರ್ ಬಿಳಿ ಬಣ್ಣದ ಕಾರು ಪತ್ತೆಯಾಗಿದೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆಗೆ ಚಂದ್ರಶೇಖರ್ ಕಾರು ಬಿದ್ದಿರುವುದು ಇದೀಗ ಖಾತ್ರಿಯಾಗಿದೆ. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದು, ಕ್ರೇನ್ ಮೂಲಕ ಕಾರನ್ನು ಮೇಲಕ್ಕೆ ಎತ್ತಲಾಗಿದೆ.
ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿತ್ತು, ಈ ಹಿನ್ನೆಲೆ ತುಂಗಾ ಕಾಲುವೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಗೋಳಿಡುತ್ತಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ 5 ದಿನವಾದ್ರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 5 ದಿನ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಆಧಾರ್ ಕಾರ್ಡ್ನಲ್ಲಿ ಏನಾದರೂ ಸಮಸ್ಯೆಗಳಿವೆಯೇ? ಕನ್ನಡದಲ್ಲೂ ಸಿಗಲಿದೆ ಪರಿಹಾರ, ಈ ಒಂದು ಸಂಖ್ಯೆಗೆ ಕರೆ ಮಾಡಿ..!