ಚಿಕ್ಕಮಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದಕ್ಕೆ ವೀರಶೈವ ಸಮಾಜದ ಮತಗಳು ದೂರವಾಗಿದ್ದು ಅಲ್ಲದೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಇದೆ ಕಾರಣವಾಯಿತು ಎಂದು ಬಿಜೆಪಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಚಿಕ್ಕಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಪಿ ರೇಣುಕಾಚಾರ್ಯ, ವೀರಶೈವ ಲಿಂಗಾಯತರ ಅಗ್ರಗಣ್ಯ ನಾಯಕ ಬಿಎಸ್ ಯಡಿಯೂರಪ್ಪ. ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಇದೇ ಪ್ರಮುಖ ಕಾರಣ. ಯಡಿಯೂರಪ್ಪ ಕೆಳಗಿಳಿಸಿದ್ದು, ನೂರಕ್ಕೆ ನೂರು ಸೋಲಿಗೆ ಕಾರಣವಾಯ್ತು. ಟಿಕೆಟ್ ಕೊಡುವ ಗೊಂದಲ, ಹಿರಿಯರ ಕಡೆಗಣನೆ ಹಾಗೂ ವೀರಶೈವ ಮತಗಳು ದೂರವಾಗಿದ್ದು ಕೂಡ ಸೋಲಿಗೆ ಕಾರಣವಾಗಿದೆ ಎಂದು ಚಿಕ್ಕಮಂಗಳೂರಿನಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದರು.
ನಿನ್ನೆ ಅಮಿತ್ ಶಾ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದರು.ಬಿವೈ ವಿಜಯೇಂದ್ರ, ಅಮಿತ್ ಶಾ ಒಂದೇ ಕಾರಿನಲ್ಲಿ ಬಂದರು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವೇದಿಕೆಯ ಮೇಲೆ ಇದ್ದರು. ಯಾರ್ಯಾರು ಏನೇನು ಕೊಟ್ಟರು ಎಂಬ ಬಗ್ಗೆ ಮಾಹಿತಿ ಇಲ್ಲ. ರಾಷ್ಟ್ರೀಯ ನಾಯಕರು ವಿಜಯೇಂದ್ರನನ್ನು ಆಯ್ಕೆ ಮಾಡಿದ್ದಾರೆ ಹೊರತು ನಾವ್ಯಾರು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಯಾರು ಬೇಕಿದ್ದರೂ ದೂರು ಕೊಡಲಿ ಅದಕ್ಕೆ ಹೆಚ್ಚಿನ ಮಹತ್ವ ಕೊಡುವುದಿಲ್ಲ ನಾವು ಯಾರ ವಿರುದ್ಧ ಸಮಾವೇಶ ಮಾಡುತ್ತಿಲ್ಲ ಎಂದು ತಿಳಿಸಿದರು.