Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಹತ್ಯೆ : ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

​ಕ್ಯುರಾಕೊ ವಿರುದ್ಧ ಜರ್ಮನಿಗೆ 7-1 ರನ್‌ಗಳ ಭರ್ಜರಿ ಜಯ; ವಿಶ್ವಕಪ್ ಅಭಿಯಾನಕ್ಕೆ ಅದ್ಧೂರಿ ಚಾಲನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಹತ್ಯೆ : ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!
KARNATAKA

BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಹತ್ಯೆ : ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

By ಸುರೇಶ್‌

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ನಡುಗಿಸಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಅದೇ ಮಾದರಿಯ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ (ಮೆಸೇಜ್) ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

ಹತ್ಯೆಯಾದ ದುರ್ದೈವಿಯನ್ನು ಬಸವನಗೌಡ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತನ ಸಂಬಂಧಿಕಳಾದ ಶ್ವೇತಾ, ಆಕೆಯ ಪತಿ ದೊಡ್ಡ ಬಸವನಗೌಡ ಮತ್ತು ಶ್ವೇತಾಳ ಸಹೋದರ ವಿಜಯ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 7ರಂದು ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಸದ್ಯ ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.

ಪರಿಚಯವೇ ಮುಳುವಾಯಿತು:

ಪೊಲೀಸ್ ತನಿಖೆಯ ಪ್ರಕಾರ, ಮೃತ ಬಸವನಗೌಡನಿಗೆ ಎರಡು ವರ್ಷಗಳ ಹಿಂದೆ ಮದುವೆಯೊಂದರಲ್ಲಿ ಶ್ವೇತಾಳ ಪರಿಚಯವಾಗಿತ್ತು. ಶ್ವೇತಾ ಸಂಬಂಧದಲ್ಲಿ ಬಸವನಗೌಡನಿಗೆ ಅತ್ತಿಗೆಯಾಗಬೇಕಿತ್ತು. ಆದರೂ ಬಸವನಗೌಡ ಆಕೆಯ ಹಿಂದೆ ಬಿದ್ದಿದ್ದ ಎನ್ನಲಾಗಿದೆ. ನಿರಂತರವಾಗಿ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಾ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಶ್ವೇತಾ ಹಲವು ಬಾರಿ ಆತನಿಗೆ ಬುದ್ಧಿವಾದ ಹೇಳಿ ಇಂತಹ ನಡವಳಿಕೆಯನ್ನು ನಿಲ್ಲಿಸುವಂತೆ ಎಚ್ಚರಿಸಿದ್ದರೂ, ಬಸವನಗೌಡ ಮಾತ್ರ ತನ್ನ ವಿಕೃತ ಚೇಷ್ಟೆಯನ್ನು ಮುಂದುವರಿಸಿದ್ದ ಎನ್ನಲಾಗಿದೆ.

ಕೊಲೆಗೆ ಹೆಣೆದರು ಜಂಟಿ ಸ್ಕೆಚ್:

ಬಸವನಗೌಡನ ಅತಿಯಾದ ಕಿರುಕುಳದಿಂದ ಬೇಸತ್ತ ಶ್ವೇತಾ, ಕೊನೆಗೆ ಈ ವಿಷಯವನ್ನು ತನ್ನ ಪತಿ ದೊಡ್ಡ ಬಸವನಗೌಡ ಹಾಗೂ ಸಹೋದರ ವಿಜಯ್ ಬಳಿ ಹಂಚಿಕೊಂಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಮೂವರೂ ಸೇರಿ ಆತನಿಗೆ ಪಾಠ ಕಲಿಸಲು ನಿರ್ಧರಿಸಿ, ಕೊಲೆಗೆ ಸಂಚು ರೂಪಿಸಿದ್ದಾರೆ. ಜೂನ್ 7ರ ರಾತ್ರಿ ಯೋಜನೆಯಂತೆಯೇ ಶ್ವೇತಾಳ ಕೈಯಿಂದ ಬಸವನಗೌಡನಿಗೆ ಕರೆ ಮಾಡಿಸಿ, ನಿರ್ದಿಷ್ಟ ಸ್ಥಳವೊಂದಕ್ಕೆ ಬರುವಂತೆ ಆಕೆ ತಿಳಿಸಿದ್ದಾಳೆ. ಅತ್ತಿಗೆಯ ಕರೆಯನ್ನೇ ನಂಬಿ ಬಸವನಗೌಡ ಸ್ಥಳಕ್ಕೆ ಬಂದಿದ್ದಾನೆ.

ಹಗ್ಗದಿಂದ ಬಿಗಿದು ಹತ್ಯೆ, ಶವಕ್ಕೆ ಬೆಂಕಿ:

ಶ್ವೇತಾ ಹೇಳಿದ ಜಾಗಕ್ಕೆ ಬಸವನಗೌಡ ಬರುತ್ತಿದ್ದಂತೆ ಹೊಂಚು ಹಾಕಿ ಕುಳಿತಿದ್ದ ಪತಿ ಮತ್ತು ಆಕೆಯ ಸಹೋದರ ಆತನ ಮೇಲೆ ಮುಗಿಬಿದ್ದಿದ್ದಾರೆ. ತಕ್ಷಣವೇ ಆತನ ಕುತ್ತಿಗೆಗೆ ಹಗ್ಗ ಬಿಗಿದು ಉಸಿರುಗಟ್ಟಿಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಅಷ್ಟಕ್ಕೇ ನಿಲ್ಲದ ಆರೋಪಿಗಳು, ಕೊಲೆಯನ್ನು ಮುಚ್ಚಿಹಾಕಲು ಶವವನ್ನು ಎಲ್‌ಎಲ್‌ಸಿ (LLC) ಕಾಲುವೆಯ ಹತ್ತಿರದ ನಿರ್ಜನ ಪ್ರದೇಶಕ್ಕೆ ಸಾಗಿಸಿದ್ದಾರೆ. ಅಲ್ಲಿ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರ ಕಾರ್ಯಾಚರಣೆ, ಮೂವರ ಬಂಧನ:

ಇತ್ತ ನಿರ್ಜನ ಪ್ರದೇಶದಲ್ಲಿ ಅರೆಬೆಂದ ಸ್ಥಿತಿಯಲ್ಲಿದ್ದ ಅಪರಿಚಿತ ಶವ ಪತ್ತೆಯಾದಾಗ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಮೋಕಾ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಮೃತದೇಹ ಬಸವನಗೌಡನದು ಎಂದು ಪತ್ತೆಯಾಗಿದ್ದು, ಆತನ ಮೊಬೈಲ್ ಕರೆಗಳ ವಿವರ (CDR) ಹಾಗೂ ತಾಂತ್ರಿಕ ವಿಶ್ಲೇಷಣೆಯ ಆಧಾರದ ಮೇಲೆ ಶ್ವೇತಾ ಮತ್ತು ಆಕೆಯ ಕುಟುಂಬದವರ ಮೇಲೆ ಪೊಲೀಸರಿಗೆ ಸಂಶಯ ಮೂಡಿದೆ. ತೀವ್ರ ವಿಚಾರಣೆ ನಡೆಸಿದಾಗ ಮೂವರೂ ಸೇರಿ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಸದ್ಯ ಮೋಕಾ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಊರಿನ ಬಡ ರೈತ ಮಹಿಳೆಗೆ ಸಿಗದ ‘ಗಂಗಾ ಕಲ್ಯಾಣ ಬೋರ್ ವೆಲ್’

2 Mins Read

Indian Blackberry: ಈ ವರ್ಷ ನೇರಳೆ ಹಣ್ಣುಗಳ ವಿಪರೀತ ಫಸಲು; ಹಿರಿಯರು ಹೇಳೋ ಆಘಾತಕಾರಿ ಮಾಹಿತಿ ಇಲ್ಲಿದೆ

2 Mins Read

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಶಾಲೆಯಲ್ಲಿ ಆಟವಾಡುತ್ತಲೆ ಕುಸಿದು ಬಿದ್ದು 1ನೇ ತರಗತಿ ವಿದ್ಯಾರ್ಥಿ ಸಾವು!

2 Mins Read
Recent News

NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಹತ್ಯೆ : ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

​ಕ್ಯುರಾಕೊ ವಿರುದ್ಧ ಜರ್ಮನಿಗೆ 7-1 ರನ್‌ಗಳ ಭರ್ಜರಿ ಜಯ; ವಿಶ್ವಕಪ್ ಅಭಿಯಾನಕ್ಕೆ ಅದ್ಧೂರಿ ಚಾಲನೆ!

​ಯುಎಸ್-ಇರಾನ್ ಶಾಂತಿ ಒಪ್ಪಂದದ ಹೊಸ್ತಿಲಲ್ಲೇ ಕಿಡಿ ಹೊತ್ತಿಸಿದ ಇಸ್ರೇಲ್: ಬೈರೂತ್‌ನಲ್ಲಿ ಹಿಜ್ಬುಲ್ಲಾ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ!

State News
KARNATAKA

BREAKING : ರಾಜ್ಯದಲ್ಲಿ ರೇಣುಕಾಸ್ವಾಮಿ ರೀತಿ ಹತ್ಯೆ : ಅಶ್ಲೀಲ ಮೆಸೇಜ್ ಮಾಡಿದಕ್ಕೆ, ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

By ಸುರೇಶ್‌ KARNATAKA 2 Mins Read

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ನಡುಗಿಸಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಅದೇ ಮಾದರಿಯ…

BIG NEWS: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಊರಿನ ಬಡ ರೈತ ಮಹಿಳೆಗೆ ಸಿಗದ ‘ಗಂಗಾ ಕಲ್ಯಾಣ ಬೋರ್ ವೆಲ್’

Indian Blackberry: ಈ ವರ್ಷ ನೇರಳೆ ಹಣ್ಣುಗಳ ವಿಪರೀತ ಫಸಲು; ಹಿರಿಯರು ಹೇಳೋ ಆಘಾತಕಾರಿ ಮಾಹಿತಿ ಇಲ್ಲಿದೆ

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಶಾಲೆಯಲ್ಲಿ ಆಟವಾಡುತ್ತಲೆ ಕುಸಿದು ಬಿದ್ದು 1ನೇ ತರಗತಿ ವಿದ್ಯಾರ್ಥಿ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.