ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂಬುದಾಗಿ ನಟ ದರ್ಶನ್ ಪರ ವಕೀಲರು ಶಾಕಿಂಗ್ ಮಾಹಿತಿಯನ್ನು ಕೋರ್ಟ್ ನಲ್ಲಿ ಬಿಚ್ಚಿಟ್ಟಿದ್ದಾರೆ.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಹಚರರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಾಜರುಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ಆರಂಭಗೊಂಡ ನಂತ್ರ, ನಟ ದರ್ಶನ್ ಪರ ವಕೀಲ ಅನಿಲ್ ಬಾಬು ಅವರು, ಎ.5, ಎ13 ಆರೋಪಿಗಳು ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಎ.5 ನಂದೀಶ್, ಎ13 ಆರೋಪಿ ದೀಪಕ್ ಅವರು, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.
ಈ ಬಳಿಕ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಸಿ, ಪವಿತ್ರಾ ಗೌಡರನ್ನು 6 ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅನುಮತಿ ಪಡೆಯದೇ ಆರೋಪಿಗಳ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಈಗಾಗಲೇ 5 ದಿನ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಹೇಳಿಕೆಗಳು ಹೊರಗಡೆ ಸೋರಿಕೆಯಾಗುತ್ತಿದೆ ಎಂದರು.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್
Nitish Kumar Health: ಬಿಹಾರ ಮುಖ್ಯಮಂತ್ರಿ ‘ನಿತೀಶ್ ಕುಮಾರ್’ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು