ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಅಂಡ್ ಟೀಂನಿಂದ 10 ಮೊಬೈಲ್ ಸೀಜ್ ಮಾಡಲಾಗಿದೆ. ಅಲ್ಲದೇ 30 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ ಅಂತ ರಾಜ್ಯ ಸರ್ಕಾರದ ಪರ ಎಸ್ ಪಿಪಿ ಪ್ರಸನ್ನ ಕುಮಾರ್ ಇಂದು ನ್ಯಾಯಪೀಠದ ಗಮನಕ್ಕೆ ತಂದರು.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್ ಮತ್ತು ಸಹಚರರನ್ನು ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಕೋರ್ಟ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಎಸ್ ಪಿಪಿ ಪಿ.ಪ್ರಸನ್ನ ಕುಮಾರ್ ಬಂಧಿತ ಆರೋಪಿಗಳಿಂದ 10 ಮೊಬೈಲ್, 30 ಲಕ್ಷ ಸೀಜ್ ಮಾಡಲಾಗಿದೆ ಅಂತ ತಿಳಿಸಿದರು.
ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಿಡಿ ಸಲ್ಲಿಸಿದರು. ಮತ್ತಷ್ಟು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ದರ್ಶನ್, ಆರೋಗಿಳನ್ನು ವಶಕ್ಕೆ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಪೊಲೀಸರ ಕಸ್ಟಡಿಗೆ ಮತ್ತೆ 9 ದಿನಗಳವರೆಗೆ ನೀಡುವಂತೆ ಮನವಿ ಮಾಡಲಾಯಿತು. ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳನ್ನು 9 ದಿನಗಳ ಕಾಲ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು.
ಈ ಪ್ರಕರಣ ಸಂಬಂಧ ನಟ ದರ್ಶನ್ ಪರ ವಕೀಲ ಅನಿಲ್ ಬಾಬು ವಕಾಲತ್ತು ಸಲ್ಲಿಸಿ, ವಾದ ಮಂಡಿಸೋದಕ್ಕೆ ಆರಂಭಿಸಿದರು. ಎ.5, ಎ13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು. ಎ.5 ನಂದೀಶ್, ಎ13 ಆರೋಪಿ ದೀಪಕ್ ಅವರಿಗೆ ಪೊಲೀಸರು ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.
ಈ ಬಳಿಕ ಪವಿತ್ರಾ ಗೌಡ ಪರ ವಕೀಲರು ವಾದ ಮಂಡಸಿ, ಪವಿತ್ರಾ ಗೌಡರನ್ನು 6 ದಿನಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅನುಮತಿ ಪಡೆಯದೇ ಆರೋಪಿಗಳ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ರಿಮ್ಯಾಂಡ್ ಅರ್ಜಿ ನೀಡುತ್ತಿಲ್ಲ. ಈಗಾಗಲೇ 5 ದಿನ ಕಸ್ಟಡಿಗೆ ಪಡೆದಿದ್ದರು ಎಂದರು.
ಸದ್ಯ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲೋ, ಬೇಲಾ ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ.
BREAKING: ಬೆಂಗಳೂರಲ್ಲಿ ನಮ್ಮ ‘ಮೆಟ್ರೋ ರೈಲು’ ಹಳಿಗಳ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್