ಬೆಂಗಳೂರು : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಬಂದಿತ 13 ಆರೋಪಿಗಳನ್ನು ಇದೀಗ ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಪೊಲೀಸರು ಕರೆತಂದಿದ್ದಾರೆ.
ಹೌದು ನಟ ದರ್ಶನ್ ಸೇರಿ 13 ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದಿದ್ದಾರೆ. ಪೊಲೀಸರು ಒಟ್ಟು 13 ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆ ತಂದಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ 12 ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಎಲ್ಲ ಬಂಧಿತ 13 ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ.