ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ನಟ ದರ್ಶನ್ ಆಪ್ತೆ ಪವಿತ್ರಾ ಗೌಡ ಜೈಲುಪಾಲಾಗಿದ್ದಾರೆ. ಅವರು ಸುಮಾರು 72 ದಿನಗಳ ಬಳಿಕ ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್.22ರಂದು ವಿಚಾರಣೆ ನಡೆಸಲಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬೆಂಗಳೂರಿಗೆ ಕರೆತಂದಿದ್ದಂತ ನಟ ದರ್ಶನ್ ಅಂಡ್ ಗ್ಯಾಂಗ್, ಆತನನ್ನು ಕೆಂಗೇರಿ ಬಳಿಯ ಶೆಡ್ ಒಂದರಲ್ಲಿ ಕೂಡಿಹಾಕಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿ, ಮೋರಿಗೆ ಎಸೆದಿತ್ತು. ಮೋರಿಯಲ್ಲಿ ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ನಂತ್ರ, ತನಿಖೆಗೆ ಇಳಿದ ಬಳಿಕ ನಟ ದರ್ಶನ್ ಅಂಡ್ ಗ್ಯಾಂಗ್ ಇಡೀ ಕೃತ್ಯ ಬಯಲಾಗಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ತೀರ್ಪಿನ ಅನುಸಾರ ಜೈಲಿಗೆ ಕಳುಹಿಸಿದ್ದರು. ಸದ್ಯ ಕೇಸ್ ಚಾರ್ಜ್ ಶೀಟ್ ಸಲ್ಲಿಕೆಯ ಹಂತದಲ್ಲಿದೆ. ಈ ವೇಳೆಯಲ್ಲೇ 72 ದಿನಗಳ ಬಳಿಕ ಆರೋಪಿ ಪವಿತ್ರಾ ಗೌಡ ಅವರು ವಕೀಲರ ಮೂಲಕ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ರೈಲು ನಿಲ್ದಾಣದಲ್ಲಿ ಆಗಿದ್ದೇನು? ಇಲ್ಲಿದೆ BMRCL ಮಾಹಿತಿ
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!
SHOCKING : ಬೆಂಗಳೂರಲ್ಲಿ ಸುದ್ದಿಗೋಷ್ಠಿಯ ವೇಳೆ ‘ಹೃದಯಾಘಾತದಿಂದ’ ಕಾಂಗ್ರೆಸ್ ಕಾರ್ಯಕರ್ತ ಸಾವು!