ಬೆಂಗಳೂರು: ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಾಯವು ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ನಟ ದರ್ಶನ್ ಅವರು ಪ್ರಕರಣದಲ್ಲಿ ಜಾಮೀನು ಕೋರಿ, ನಾಳೆ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಇಂದು ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಿಂದ ಜಾಮೀನು ನಿರೀಕ್ಷೆಯಲ್ಲಿದ್ದರು. ಆದರೇ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ ಬಿಗ್ ಶಾಕ್ ನೀಡಲಾಗಿತ್ತು.
ಈ ಹಿನ್ನಲೆಯಲ್ಲಿ ನಾಳೆ ನಟ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಲಿದ್ದಾರೆ.
GOOD NEWS: ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್