ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಇದೀಗ ಪುಸ್ತಕಗಳ ಮೊರೆ ಹೋಗಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಮತ್ತೆ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ.
ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಇದೀಗ ದಿನ ಕಳೆಯಲು ನಟ ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲು ಗ್ರಂಥಾಲಯದಿಂದ ಪುಸ್ತಕಗಳನ್ನು ಪಡೆದಿದ್ದಾರೆ. ನಿನ್ನೆ ಜೈಲು ಅಧಿಕಾರಿಗಳಿಗೆ ಪುಸ್ತಕ ನೀಡುವಂತೆ ಮನವಿ ಮಾಡಿದ್ದರು. ಇಂದು ಬೆಳಗ್ಗೆ ಜೈಲು ಮೆನುವಿನಂತೆ ನಟ ದರ್ಶನ್ ಉಪ್ಪಿಟ್ಟು ಸೇವಿಸಿದ್ದಾರೆ.