ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವಂತಹ ಆರೋಪಿ ದರ್ಶನ್ ನನ್ನು ನೋಡಲು ಇಂದು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ದನ್ವೀರ್ ಆಗಮಿಸಿದ್ದರು.
ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವಿರ್ ದರ್ಶನ ಭೇಟಿ ಆಗಲು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಬೇಟಿಯ ವೇಳೆ ಸ್ವಲ್ಪ ಹೊತ್ತು ಮಾತನಾಡಿದ ಬಳಿಕ ನಟ ದನ್ವೀರ್ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ನಟ ದರ್ಶನ್ ಕೆಲವು ಹೊತ್ತು ಮಾತುಕತೆ ನಡೆಸಿದ್ದು, ಜಾಮೀನು ಕುರಿತಾಗಿ ಹಾಗೂ ಕಾನೂನು ಹೋರಾಟದ ಕುರಿತಾಗಿ ನಟ ದರ್ಶನ್ ವಿಜಯಲಕ್ಷ್ಮಿ ಅವರೊಂದಿಗೆ ಚರ್ಚಿಸಿದ್ದಾರೆ. ಕೇವಲ ಅರ್ಧ ಗಂಟೆ ಸಮಯ ಇರುವುದರಿಂದ ನಟ ದನ್ವೀರ್ ಹಾಗೂ ಪತ್ನಿ ವಿಜಯಲಕ್ಷ್ಮಿ ನಟ ದರ್ಶನ್ ಅವರನ್ನು ಇದೀಗ ಬಳ್ಳಾರಿ ಜಿಲ್ಲೆಯಲ್ಲಿ ಭೇಟಿ ಮಾಡಿದ್ದಾರೆ.