ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಜಾಮೀನು ಕೋರಿ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.27ಕ್ಕೆ ಮುಂದೂಡಿಕೆ ಮಾಡಿದೆ.
ಇಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಎ.1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶೈಂಕರ್ ವಿಚಾರಣೆ ನಡೆಸಿದರು. ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವನ್ನು ಎಸ್ ಪಿಪಿ ಪ್ರಸನ್ನ ಕುಮಾರ್ ಕೋರಿದರು. ಈ ಹಿನ್ನಲೆಯಲ್ಲಿ ಅರ್ಜಿಯನ್ನು ಕೋರ್ಟ್ ಸೆಪ್ಟೆಂಬರ್.27ಕ್ಕೆ ಮುಂದೂಡಿಕೆ ಮಾಡಿದೆ.
ಅಂದಹಾಗೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರರು ಜೈಲು ಪಾಲಾಗಿದ್ದಾರೆ. ಇಂತಹ ಆರೋಪಿಗಳಲ್ಲಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿಕೆ ಮಾಡಿದೆ.
BREAKING: ಅತ್ಯಾಚಾರ ಪ್ರಕರಣ: ಸೆ.25ಕ್ಕೆ ಶಾಸಕ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!