ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಪರಿಶೀಲಿಸೋದಕ್ಕೆ ಪೊಲೀಸರಿಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ನಟ ದರ್ಶನ್ ಅಂಡ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.
ಇಂದು ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಜುಲೈ.4ರವರೆಗೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಇದೇ ಸಂದರ್ಭದಲ್ಲಿ ಕೋರ್ಟ್ ಗೆ ನಟ ದರ್ಶನ್ ಸಹಚರರಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದಂತ ಆರೋಪ ಕೇಳಿ ಬಂದ ಕಾರಣ, ಮತ್ತೊಂದು ಎಫ್ಐಆರ್ ಕೂಡ ದಾಖಲಿಸಿರೋದಾಗಿ ಮಾಹಿತಿ ನೀಡಿದ್ದಾರೆ.
ಇನ್ನೂ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸೋದಕ್ಕಾಗಿ ಎ2 ಆರೋಪಿ ನಟ ದರ್ಶನ್, ಎ9 ಧನರಾಜ್, ಎ10 ವಿನಯ್ ಹಾಗೂ ಎ14 ಪ್ರದೋಶ್ ಮೊಬೈಲ್ ಪರಿಶೀಲಿಸೋದಕ್ಕೆ ಅನುಮತಿ ನೀಡುವಂತೆಯೂ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ನ್ಯಾಯಾಲಯವು, ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಮೊಬೈಲ್ ಅನ್ ಲಾಕ್ ಮಾಡಿ, ಪರಿಶೀಸಿಸೋದಕ್ಕೆ ಅನುಮತಿಸಿದೆ.
‘ದ್ವಿತೀಯ PU ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-3ಕ್ಕೆ ಉಚಿತವಾಗಿ ‘BMTC’ ಬಸ್’ನಲ್ಲಿ ತೆರಳಲು ಅವಕಾಶ