ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವಂತ ಎ.16 ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಲಾಗಿದೆ. ಈ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಎ16ನೇ ಆರೋಪಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ಕೋರ್ಟ್ ವಿಚಾರಣೆ ನಡೆಸಿತು.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವಂತ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಮರ್ಜರ್ ಕೇಸಲ್ಲಿ ಆರೋಪಿಯಾಗಿರುವಂತ ಕೇಶವ ಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಅಂದಹಾಗೇ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿಲ್ಲ. ಬದಲಾಗಿ ಸಾಕ್ಷ್ಯನಾಶದ ಪ್ರಕರಣ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಇನ್ನೂ ಇದೇ ಪ್ರಕರಣದಲ್ಲಿ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ಕೋರ್ಟ್ ಸೆ.27ಕ್ಕೆ ಮುಂದೂಡಿದೆ.
BREAKING: ರಾಜ್ಯ ಸರ್ಕಾರದಿಂದ ‘ಮೈಸೂರು ದಸರಾ ಆನೆ’ ಮುಂದೆ ಪೋಟೋ, ರೀಲ್ಸ್ ಗೆ ಬ್ರೇಕ್: ನಿಯಮ ಮೀರಿದ್ರೆ ಕೇಸ್ ಫಿಕ್ಸ್
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!