ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೆಲ ಆರೋಪಿಗಳ ಜಾಮೀನು ಅರ್ಜಿಯ ಕುರಿತಂತೆ ವಾದವನ್ನು ಆಲಿಸಿತು. ಆ ಬಳಿಕ ಪ್ರಕರಣದಲ್ಲಿನ ಇತರೆ ಆರೋಪಿಗಳ ಕಾಯ್ದಿರಿಸಿದ್ದಂತ ಜಾಮೀನು ಆದೇಶವನ್ನು ಪ್ರಕಟಿಸಿದೆ.
ಎ.1 ಆರೋಪಿ ಪವಿತ್ರಾ ಗೌಡ, ಎ.2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎ.8 ಆರೋಪಿ ರವಿಶಂಕರ್ ಹಾಗೂ ಎ.13 ಆರೋಪಿ ದೀಪಕ್ ಪರ ವಕೀಲರ ವಾದವನ್ನು ಆಲಿಸಿಜದ್ದಂತ ನ್ಯಾಯಾಲಯವು ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಮಂಜೂರು ಮಾಡಿದೆ.
ಅಂದಹಾಗೇ ಎ8 ಆರೋಪಿ ರವಿಶಂಕರ್ ತುಮಕೂರು ಜೈಲಿನಲ್ಲಿದ್ದಾರೆ. ಅವರನ್ನು ನಾಳೆ ಜಾಮೀನು ಹಿನ್ನಲೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.
BREAKING: ‘ರಾಜ್ಯ ಸರ್ಕಾರಿ ನೌಕರರ ಸಂಘ’ಕ್ಕೆ ‘ಆಡಳಿತಾಧಿಕಾರಿ ನೇಮಕ’ಕ್ಕೆ ಹೈಕೋರ್ಟ್ ತಡೆಯಾಜ್ಞೆ
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್