ಬೆಂಗಳೂರು : ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂದು ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ನಟ ದರ್ಶನ್, ನಟಿ ಪವಿತ್ರ ಗೌಡ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಆರೋಪಿಗಳನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ ಆದೇಶ ಬಂದ ತಕ್ಷಣ ನಟ ದರ್ಶನ್ ಪವಿತ್ರ ಗೌಡ ಹಾಗೂ 13 ಆರೋಪಿಗಳನ್ನು ಪೊಲೀಸ್ ವ್ಯಾನ್ ನಲ್ಲಿ ಕರೆದುಕೊಂಡು ಹೋಗುವಾಗ ದರ್ಶನ್ ಪವಿತ್ರ ಗೌಡ ಹಾಗೂ ಎಲ್ಲಾ 13 ಆರೋಪಿಗಳು ಮುಖ ಮುಚ್ಚಿಕೊಂಡಿರುವ ಘಟನೆ ನಡೆಯಿತು.
ಈ ಒಂದು ಪ್ರಕರಣದಲ್ಲಿ ನಟಿ ಪವಿತ್ರ ಗೌಡ ಎ1 ಆರೋಪಿಯಾಗಿದ್ದು, ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಇನ್ನು ದರ್ಶನ ಸಹಚರರು ಕೂಡ ಈ ಒಂದು ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಕೋರ್ಟ್ ನಿಂದ ಪೊಲೀಸ್ ವ್ಯಾನ್ ನಲ್ಲಿ ಠಾಣೆಗೆ ಕರೆದೊಯ್ಯುವ ವೇಳೆ ಮುಖ ಮುಚ್ಚಿಕೊಂಡು ತೆರಳಿದಾಗ ಕೊಲೆ ಮಾಡುವ ಸಂದರ್ಭದಲ್ಲಿ ನೆನಪಾಗಲಿಲ್ಲವೇ ಈಗ ಮುಖ ಮುಚ್ಚಿಕೊಂಡರೆ ಏನು ಪ್ರಯೋಜನ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.