ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬಹಿರಂಗವಾಗಿದ್ದೇ ರೋಚಕವಾಗಿದ್ದು, ಕೊಲೆ ಪ್ರಕರಣದಲ್ಲಿ ಮೊದಲು ನಾಲ್ವರು ಆರೋಪಿಗಳು ಶರಣಾಗಿದ್ದರು.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಮಾಡಿದ ರೇಣುಕಾಸ್ವಾಮಿಯನ್ನು ಪಕ್ಕಾ ಪ್ಲ್ಯಾನ್ ಮಾಡಿ ಕಿಡ್ನಾಪ್ ಮಾಡಲಾಗಿದ್ದು, ಬಳಿಕ ಶೆಡ್ ವೊಂದರಲ್ಲಿ ಕರೆದುಕೊಂಡು ಹೋಗಿ ರೇಣುಕಾಸ್ವಾಮಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ನಂತ್ರ ಮರ್ಮಾಂಗಕ್ಕೆ ಒತ್ತು ಕೊಲೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ರೇಣುಕಾಸ್ವಾಮಿ ಕೊಲೆಯಾದ ಬಳಿಕ ಮೃತದೇಹ ವಿಲೇವಾರಿಗೆ 30 ಲಕ್ಷ ರೂ. ಪಡೆದುಕೊಂಡಿದ್ದ ಮೂವರ ಗ್ಯಾಂಗ್, ರಾತ್ರಿಯಿಡಿ ದರ್ಶನ್ ಜೊತೆಗೆ ವಾಟ್ಸಪ್ ಕಾಲ್ ನಲ್ಲಿ ಸಂಪರ್ಕದಲ್ಲಿದ್ದರು. ಬಳಿಕ ಶವ ಪತ್ತೆಯಾಗುತ್ತಿದ್ದಂತೆ ಒಬ್ಬೊಬ್ಬರಾಗಿ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಬಳಿಕ ನಾಲ್ವರು ಆರೋಪಿಗಳು ಶರಣಾಗುವಂತೆ ದರ್ಶನ್ ಸೂಚನೆ ನೀಡಿದ್ದರು ಎನ್ನಲಾಗಿದೆ. ಬಳಿಕ ಅನುಮಾನಗೊಂಡ ಪೊಲೀಸರು ತಮ್ಮದೇ ಸ್ಟೈಲ್ ನಲ್ಲಿ ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರನದ A-1 ಆರೋಪಿಯಾಗಿರುವ ಪವಿತ್ರಾಗೌಡ ಆರೋಪಿಗಳು ಶರಣಾಗುವ ಮುನ್ನ ಯಾವುದೇ ಕಾರಣಕ್ಕೂ ದರ್ಶನ್ ಹೆಸರು ಹೇಳದಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ.