ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ಒಂದೇ ಒಂದು ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆಗೈದು, ಮೋರಿಗೆ ಶವವನ್ನು ಎಸೆಯಲಾಗಿತ್ತು. ಈ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಮಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದರು. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರ ಮುಂದೆ ವಿಚಾರಣೆ ವೇಳೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಅವರು ಕಣ್ಣೀರಿಟ್ಟರು.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು.
ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಬೆಂಗಳೂರಿನ ಶೆಡ್ ಒಂದರಲ್ಲಿ ಕೂಡಿ ಹಾಕಿ. ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಡ್ ನಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮ, ಆತ ಶೆಡ್ ನಲ್ಲೇ ಸಾವನ್ನಪ್ಪಿದ್ದನಂತೆ. ಆತನ ಶವವನ್ನು ಮೋರಿಗೆ ಎಸೆಯಲಾಗಿತ್ತು.
ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳನ್ನು ಬಂಧಿಸಿ, ಮೆಡಿಕಲ್ ಟೆಸ್ಟ್ ಬಳಿಕ, ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆಯಲ್ಲಿ ಜಡ್ಜ್ ಮುಂದೆ ನಟ ದರ್ಶನ್, ಪವಿತ್ರಾ ಗೌಡ ಕಣ್ಣೀರಿಟ್ಟರು ಎಂಬುದಾಗಿ ತಿಳಿದು ಬಂದಿದೆ.
BREAKING: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ‘ಹೆಚ್.ಡಿ ಕುಮಾರಸ್ವಾಮಿ’ ಅಧಿಕಾರ ಸ್ವೀಕಾರ