ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಇದೀಗ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬಳ್ಳಾರಿ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ತಂಡೋಪ ತಂಡವಾಗಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ.
ಹೌದು ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಇನ್ನೂ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ ಸ್ಥಳಾಂತರಿಸಲಾಗಿದೆ. ದರ್ಶನ್ ಅನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಅವರ ಅಭಿಮಾನಿಗಳು ಬರುತ್ತಲೇ ಇದ್ದಾರೆ.
ದರ್ಶನ್ ಬೇಟಿಗೆ ಬಂದಂತಹ ಅಭಿಮಾನಿ ಒಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿ, ದರ್ಶನ್ ಅವರು ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಆದರೆ ಅವರ ಮೇಲಿರುವ ಅಭಿಮಾನ ನಮಗೆ ಯಾವತ್ತಿಗೂ ಕಡಿಮೆಯಾಗುವುದಿಲ್ಲ. ಈ ಒಂದು ಘಟನೆ ನಡೆಯಬಾರದಿತ್ತು ಆದರೂ ಕೂಡ ನಮ್ಮ ದರ್ಶನ್ ಅವರ ಮೇಲೆ ಅಭಿಮಾನ ಎಳ್ಳಷ್ಟು ಕಡಿಮೆಯಾಗಿಲ್ಲ. ಅವರ ಸಾಮಾಜಿಕ ಕಾರ್ಯಗಳಾಗಿರಬಹುದು ಅನೇಕ ರೀತಿಯ ಸಹಾಯ ಕೆಲಸವಾಗಿರಬಹುದು ಇದೆಲ್ಲ ನೋಡಿ ಅವರ ಮೇಲೆ ನಮಗೆ ಅಭಿಮಾನ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದರು.