ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾದಂತಹ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು.ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಉಲ್ಲೇಖಿಸಿ ವಾದ ಮಂಡಿಸಿದರು
ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಸಿ ಜಾಮೀನು ಉಲ್ಲೇಖಿ ಸಿಸಿ ನಾಗೇಶ್ ವಾದ ಮಂಡಿಸಿದ್ದು, ಡಿಕೆ ಶಿವಕುಮಾರ್ ಅವರಿಗಿದ್ದ ಸಮಸ್ಯೆ ಗಿಂತ ಹೆಚ್ಚಿನ ಅನಾರೋಗ್ಯ ದರ್ಶನ್ ಅವರಿಗೆ ಇದೆ. 2022 23ರಲ್ಲಿಯೂ ಈ ಬಗ್ಗೆ ಚಿಕಿತ್ಸೆ ಪಡೆಯಲಾಗಿದೆ. ಬೆನ್ನು ಹುರಿಯ ಸಮಸ್ಯೆಯಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಸಮಸ್ಯೆ ಆಗಬಹುದು.
ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗುವುದಿಲ್ಲ. ಶಸ್ತ್ರಚಿಕಿತ್ಸೆಯಿಂದ ಮಾತ್ರವೇ ಈ ಸಮಸ್ಯೆ ಗುಣಪಡಿಸಬಹುದಾಗಿದೆ ಎಂದು ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.