ಬೆಂಗಳೂರು : ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಭೇಟಿಗಾಗಿ ಕುಟುಂಬ ಇದೀಗ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ಇದೀಗ ಜೈಲಿಗೆ ಆಗಮಿಸಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ ಸೇರಿ 17 ಆರೋಪಿಗಳಿಗೆ ಜುಲೈ 18ರ ವರೆಗೆ ನ್ಯಾಯಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಜೈಲಿನಲ್ಲಿ ಊಟ ಸೇರದೆ ದರ್ಶನ್ ಅವರು ದಿನದಿಂದ ದಿನಕ್ಕೆ ತಮ್ಮ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ.
ವಾರದಲ್ಲಿ ಕೇವಲ ಮೂರು ದಿನ ಮಾತ್ರ ಭೇಟಿಗೆ ಅವಕಾಶ ಇದ್ದಿದ್ದರಿಂದ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ ತೂಗುದೀಪ ಅವರು ನಟ ದರ್ಶನ್ ಅವರನ್ನು ಭೇಟಿ ಮಾಡಲು ಜೈಲಿಗೆ ಆಗಮಿಸಿದ್ದರು. ಕಳೆದ ಕೆಲವು ದಿನಗಳ ಹಿಂದೆ ನಟ ದರ್ಶನ್ ಅವರಿಗೆ ಬಟ್ಟೆ, ಹಣ್ಣು ಹಾಗೂ ಓದಲು ಪುಸ್ತಕ ಸೇರಿದಂತೆ ಹಲವು ವಸ್ತುಗಳನ್ನು ತಂದು ಕೊಟ್ಟಿದ್ದರು. ಪತಿಯ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮಿ ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.