ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿಸಲ್ಪಟ್ಟ ಪುತ್ರನ ಸುದ್ದಿ ಕೇಳಿ ಅವರ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನು ಆಲಿಯಾಸ್ ಅನುಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಿ, ಆ ನಂತ್ರ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಈ ಬೆನ್ನಲ್ಲೇ ಪುತ್ರ ಹಾಗೂ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಅನುಕುಮಾರ್ ಬಂಧನದ ಸುದ್ದಿ ಕೇಳಿದಂತ ಅವರ ತಂದೆ ಚಂದ್ರಣ್ಣ(60) ಹೃದಯಾಘಾತದಿಂದ ನಿಧನರಾಗಿರೋದಾಗಿ ತಿಳಿದು ಬಂದಿದೆ.
ರೈತರೇ ನಿಮ್ಮ ಬೆಳೆಗೆ ‘ಸೈನಿಕ ಹುಳು’ ಬಾಧೆಯೇ? ಜಸ್ಟ್ ಈ ನಿಯಂತ್ರಣ ಕ್ರಮವಹಿಸಿ