ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಗೌಡ ಮತ್ತು ಗ್ಯಾಂಗ್ ಈಗಾಗಲೇ ಜೈಲು ಪಾಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಾಲ್ವರು ಆರೋಪಿಗಳನ್ನು ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹೌದು ಇಂದು 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ಸಾಧ್ಯತೆ ಇದೆ. ರವಿಶಂಕರ್, ಕಾರ್ತಿಕ್, ಕೇಶವ, ನಿಖಿಲ ನಾಯಕ್ ಆರೋಪಿಗಳನ್ನು ಶಿಫ್ಟ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಆರೋಪಿಗಳ ಸ್ಥಳಾಂತರಕ್ಕೆ ಅನುಮೋದನೆ ನೀಡಿದ ಬಂಧಿಖಾನೆಯ ಎಡಿಜಿಪಿ.
ಕೋರ್ಟ್ ಆದೇಶದಂತೆ ವಿಚಾರಣಾದಿನ ಕೈದಿಗಳನ್ನು ಶಿಫ್ಟ್ ಮಾಡಲು ಅನುಮೋದನೆ ದೊರಕಿದೆ. ಆರೋಪಿಗಳ ಸ್ಥಳಾಂತರ ಪ್ರಕ್ರಿಯೆಯನ್ನು ಜೈಲಧಿಕಾರಿಗಳು ಈಗಾಗಲೇ ಮುಗಿಸಿದ್ದಾರೆ. ಮಧ್ಯಾಹ್ನ ಪರಪ್ಪನ ಅಗ್ರಹಾರ ಜಯಲಿಂದ ತುಮಕೂರು ಜಿಲ್ಲೆಗೆ ಶಿಫ್ಟ್ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ನಾವೇ ಕೊಂದಿದ್ದೇವೆಂದು ಹೇಳಿಕೊಂಡು ಮೊದಲು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಶರಣಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೂವರು ಬಾಯ್ಬಿಟ್ಟಿದ್ದರಿಂದ ದರ್ಶನ್ ಮತ್ತು ಗ್ಯಾಂಗ್ ಬಂಧನವಾಗಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಸೆಂಟ್ರಲ್ ಜೈಲಿಗೆ ಸ್ಥಳಾಂತರಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದ್ದರು.
ಆರೋಪಿಗಳ ಸ್ಥಳಾಂತರ ಅಗತ್ಯದ ಬಗ್ಗೆ ಕೋರ್ಟ್ಗೆ ಎಸ್ಪಿಪಿ ಪಿ.ಪ್ರಸನ್ನಕುಮಾರ್ ವಿವರಣೆ ನಂತರ ಸ್ಥಳಾಂತರಕ್ಕೆ ಆದೇಶಿಸಲಾಗಿದೆ. ಹಾಗಾಗಿ ಇಂದು ಈ ನಾಲ್ವರು ಆರೋಪಿಗಳನ್ನು ತುಮಕೂರು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.