ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖಾಧಿಕಾರಿಯನ್ನು ಇಂದಿನಿಂದ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದ ಎಸಿಪಿ ಚಂದನ್ ಅವರನ್ನು ಮತ್ತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇಷ್ಟು ದಿನ ವರ್ಗಾವಣೆ ಮಾಡುತ್ತಿದ್ದ ವಿಜಯನಗರ ಉಪವಿಭಾಗ ಪೊಳಿಸ್ ಠಾಣೆಯ ಇನ್ಸ್ ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ಮತ್ತೆ ತಮ್ಮ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಇಂದಿನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಎಸಿಪಿ ಚಂದನ್ ನಡೆಸಲಿದ್ದಾರೆ.