ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ಫೋಟೆಜ್ ಗಳು, ಆರೋಪಿಗಳ ಚಲನವಲನ, ಓಡಾಡಿರುವ, ಮೃತ ದೇಹ ಸಾಗಿಸಿದ ಮಾರ್ಗ ಸೇರಿದಂತೆ ಇದುವರೆಗೂ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದು, ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆ ಸಂಬಂಧ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಲು ಮುಂದಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಪೊಲೀಸರು ಕೊಲೆ ಪ್ರಕರಣದ ಪ್ರಮುಖ ಸಾಕ್ಷಾಧಾರಾಗಳಾದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ರೆಸ್ಟೋರೆಂಟ್ ಆದಂತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಿಂದ ಪಟ್ಟಣಗೆರೆ ಶೆಡ್ ವರೆಗಿನ ಮಾರ್ಗ ಮಧ್ಯದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಎಲ್ಲಾ ಸಿಸಿಟಿವಿಗಳ ದೃಶ್ಯಗಳನ್ನು ಸಂಗ್ರಹ ಮಾಡುತ್ತಿದ್ದು ಶೆಡ್ ಇಂದ ಸೋಮನಹಳ್ಳಿ ರಾಜ ಕಾಲುವೆ ಮಾರ್ಗ ಸಿಸಿಟಿವಿಗಳನ್ನು ಸಂಗ್ರಹಿಸುತ್ತಿದ್ದಾರೆ.
ರಸ್ತೆಯ ಬದಿಯ ಎಲ್ಲಾ ಹೋಟೆಲ್ ಸಿಸಿಟಿವಿ ದೃಶ್ಯಗಳನ್ನ ಸಂಗ್ರಹಿಸುತ್ತಿವ ಪೊಲೀಸರು ಆರೋಪಿಗಳ ಚಲನವಲನ ಓಡಾಟದ ದೃಶ್ಯಾವಳಿಗಳ ಸಂಗ್ರಹ ಮಾಡುತ್ತಿದ್ದಾರೆ. ನಂತರ ದರ್ಶನ್ ಮನೆ, ಪವಿತ್ರ ಗೌಡ ಮನೆ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಸಂಗ್ರಹಿಸುತ್ತಿದ್ದಾರೆ. ಈವರೆಗೆ 33ಕ್ಕೂ ಹೆಚ್ಚು ಸಿಸಿಟಿಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.