ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ತಮ್ಮ ಕಸ್ಟಡಿಗೆ 13 ಆರೋಪಿಗಳನ್ನು ಪಡೆದಿರುವಂತ ಪೊಲೀಸರು, ಇಂದು ಅವರನ್ನು ಕರೆದೊಯ್ದು ಸ್ಥಳ ಮಹಜರ್ ನಡೆಸಿದರು. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯಗಳು ಪೊಲೀಸರಿಗೆ ಲಭ್ಯವಾಗಿದ್ದಾವೆ ಎನ್ನಲಾಗುತ್ತಿದೆ.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎ1 ಆರೋಪಿ ಪವಿತ್ರಾ ಗೌಡ ಅವರ ರಾಜರಾಜೇಶ್ವರಿ ನಗರದಲ್ಲಿರುವಂತ ಮನೆಗೆ ಕರೆದೊಯ್ದ ಪೊಲೀಸರು, ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ವೇಳೆಯಲ್ಲಿ ಪವಿತ್ರಾ ಗೌಡಗೆ ಸಂಬಂಧಿಸಿದಂತ ಅನೇಕ ವಸ್ತುಗಳನ್ನು ಕೊಲೆ ಪ್ರಕರಣದಲ್ಲಿ ಸೀಜ್ ಮಾಡಿರೋದಾಗಿ ತಿಳಿದು ಬಂದಿದೆ.
ಇನ್ನೂ ಚಿತ್ರದುರ್ಗದ ಸಿಹಿನೀರು ಹೊಂಡದ ಬಳಿಯಲ್ಲಿನ ಅನು ಆಲಿಯಾಸ್ ಅನುಕುಮಾರ್ ಮನೆಗೂ ಆರೋಪಿಯನ್ನು ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಿದರು. ಆತನ ಮನೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂದ ಕೆಲ ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದು, ಅವುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿರೋದಾಗಿ ಹೇಳಲಾಗುತ್ತಿದೆ.
ಇದೇ ವೇಳೆಯಲ್ಲಿ ಪೊಲೀಸರು ರೇಣುಕಾಸ್ವಾಮಿ ಹತ್ಯೆ ಸಂಬಂಧ ಆರೋಪಿಗಳಿಗೆ ಹಣ ಸಂದಾಯದ ಬಗ್ಗೆಯೂ ಮಾಹಿತಿ ಕಲೆಹಾಕುತ್ತಿದ್ದಾರೆ.
ಶಿವಮೊಗ್ಗದಲ್ಲಿ ‘NCC ಕ್ಯಾಂಪ್’ನಲ್ಲಿ ಊಟ ಸೇವಿಸಿದ 9 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ