ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ದಿನೇ ದಿನೇ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದುರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ ನನ್ನ ಮೈಸೂರು ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

ಪೊಲೀಸರು ವಶಕ್ಕೆ ಪಡೆದಿರೋ ವ್ಯಕ್ತಿ ರೇಣುಕಾಸ್ವಾಮಿ ಕೊಲೆಯಾದ ಶೆಡ್​ಗೆ ಪವಿತ್ರಾ ಜೊತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗ್ತಿದ್ದು, ಇದೇ ಕಾರಣಕ್ಕೆ ದೇವರಾಜ್ ನನ್ನ ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪೊಲೀಸರು ವಶಕ್ಕೆ ಪಡೆದಿರುವಂತ ದೇವರಾಜ್ ಗೌಡ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತ್ರ, ಅಗತ್ಯ ಬಿದ್ರೆ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದೇವರಾಜ್ ಗೌಡ ಬಂಧನ ಹಿನ್ನೆಲೆಯಲ್ಲಿ ಪವಿತ್ರಗೌಡಗೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಳು ಹೊರ ಬರುವ ಸಾಧ್ಯತೆ ಇದೆ. ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕರೂ ಸಿಗಬಹುದು ಎಂದು ಹೇಳಲಾಗುತ್ತಿದೆ. ಇದು ಸಹಜವಾಗಿಯೇ ಪವಿತ್ರಗೌಡಗೆ ಭಯ ಶುರುವಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಕೇಂದ್ರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

Share.
Exit mobile version