ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಡೆವಿಲ್ ಚಲನಚಿತ್ರದ ನಿರ್ದೇಶಕ ಮಿಲನ ಪ್ರಕಾಶ್ ಅವರು ಪೊಲೀಸರ ಎದುರಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಆದರೆ ಪೊಲೀಸರು ಎಂದು ಕೂಡ ವಿಚಾರಣೆಗೆ ಬರಬೇಕು ಎಂದು ತಿಳಿಸಿದಾಗ ಮಿಲನ ಪ್ರಕಾಶ್ ಅವರು ಇದೀಗ ವಿಚಾರಣೆಗೆ ಆಗಮಿಸಿದ್ದಾರೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಬ್ಬರನ್ನು ವಿಚಾರಣೆ ನಡೆಸಲಿರುವ ಪೊಲೀಸರು. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಇಂದು ವಿಚಾರಣೆ ನಡೆಯಲಿದೆ. ಬಿಜೆಪಿ ಶಾಸಕನ ಕಾರು ಚಾಲಕ ಕಾರ್ತಿಕ್ ಪುರೋಹಿತ್ ಹಾಗೂ ನಿರ್ದೇಶಕ ಮಿಲನ ಪ್ರಕಾಶ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.
ನಿನ್ನೆ ಸುಮಾರು ಒಂದುವರೆ ಗಂಟೆ ವಿಚಾರಣೆಯನ್ನು ಮಿಲನ ಪ್ರಕಾಶ ಅವರು ಎದುರಿಸಿದ್ದರು, ದರ್ಶನ್ ಜೊತೆಗಿನ ಹಣಕಾಸಿನ ವ್ಯವಹಾರದ ಬಗ್ಗೆ ವಿಚಾರಣೆ ಮಾಡಲಾಗುತ್ತದೆ.ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.ಇಂದು ಕೂಡ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ.