ಬೆಂಗಳೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನಂ.19 ಕೊಚ್ಚಿ ಹೋಗಿದೆ. ಇದನ್ನು ಕೂಡಲೇ ಸರಿಪಡಿಸಿ, ಬೇಸಿಗೆಯಲ್ಲಿ ರೈತ ಬೆಳೆಗಳಿಗೆ ನೀರು ಒದಗಿಸುವಂತ ಕೆಲಸ ಮಾಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೊದಲೇ ನೊಂದಿರುವ ಜನಕ್ಕೆ ಜಲಬಾಧೆ ಆವರಿಸದಿರಲಿ. ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ ಎಂದಿದ್ದಾರೆ.
ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.
ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
“ಮೊದಲೇ ನೊಂದಿರುವ ಜನಕ್ಕೆ
ಜಲಬಾಧೆ ಆವರಿಸದಿರಲಿ”ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ.
ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್… pic.twitter.com/qF484hsUOA
— Vijayendra Yediyurappa (@BYVijayendra) August 11, 2024
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ
ನೀರನ್ನು ಉಳಿಸಿಕೊಂಡು ‘ತುಂಗಭದ್ರಾ ಡ್ಯಾಂ ಗೇಟ್’ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್