ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣ ಸಂಬಂಧ ನೀಡಿರುವಂತ ನೋಟಿಸ್ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಅದೇ ಸಿಎಂಗೆ ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ಅವರಿಗೆ ನೀಡಿರುವಂತ ನೋಟಿಸ್ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಪಾಲರು ಸಿಎಂಗೆ ನೋಟಿಸ್ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ಧರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು ಸರಿಯಲ್ಲ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವಾಗಿಯೇ ಎಲ್ಲರೂ ಸೇರಿ ನಿರ್ಣಯ ಮಾಡಿದ್ದೇವೆ. ಅದೇ ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡುವಂತ ನಿರ್ಣಯವಾಗಿದೆ ಎಂದು ಅವರು ಹೇಳಿದರು.
ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡಲಾಗುತ್ತದೆ. ರಾಜ್ಯಪಾಲರಿಗೆ ಸಲಹೆ ನೀಡುವಂತ ನಿರ್ಣಯವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಗಿದೆ ಎಂದರು.
‘HSRP’ ನಂಬರ್ ಪ್ಲೇಟ್ ಬುಕಿಂಗ್ ವೇಳೆ ಇರಲಿ ಎಚ್ಚರ : ಸೈಬರ್ ವಂಚಕರಿಂದ 95 ಸಾವಿರ ರೂ. ಕಳೆದುಕೊಂಡ ವ್ಯಕ್ತಿ!
BREAKING : ನಟ ದರ್ಶನ್ ಗೆ ಜೈಲೇ ಗತಿ : ಆ.14ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್ ಆದೇಶ