Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

ಎಜಿಆರ್, ಆದಾಯದಲ್ಲಿ ಶೇ 43ರಷ್ಟು ಪಾಲಿನೊಂದಿಗೆ ಬಲವಾದ ಬೆಳವಣಿಗೆಯೊಂದಿಗೆ ಜಿಯೋ ಮುಂಚೂಣಿಯಲ್ಲಿ

26/02/2026 5:43 PM

ಅಡುಗೆ ಮನೆಯ ‘ಶುಂಠಿ’ ಕೇವಲ ಸಾಂಬಾರ ಪದಾರ್ಥವಲ್ಲ, ಇದು ಸರ್ವರೋಗ ನಿವಾರಕ! | Ginger Health Benefits

26/02/2026 5:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಲು‌ ಕೇಂದ್ರಕ್ಕೆ ಮನವಿ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
KARNATAKA

ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಲು‌ ಕೇಂದ್ರಕ್ಕೆ ಮನವಿ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By kannadanewsnow0511/11/2025 10:58 AM

ದಾವಣಗೆರೆ.ನ.10: ಅಡಕೆ ಬಗ್ಗೆ ಮತ್ತಷ್ಟು ಪರಿಣಾಮಕಾರಿಯಾದ ಸಂಶೋಧನೆಗಳ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದ್ದು, ಸಂಶೋಧನೆಗೆ ಹೆಚ್ಚು ಅನುದಾನ ನೀಡುವಂತೆ ಕೂಡ ಕೇಂದ್ರ ಮನವಿ ಸಲ್ಲಿಸಲಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಚನ್ನಗಿರಿ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಾಗಿನಕಟ್ಟೆ ಗ್ರಾಮದಲ್ಲಿ ಸೋಮವಾರ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ದಾವಣಗೆರೆ ಜಿಲ್ಲೆ ದೇಶದಲ್ಲಿಯೇ ಅತಿ ಹೆಚ್ಚು ಅಡಿಕೆ ಬೆಳೆಯುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ ಅಡಿಕೆಯ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಸಬೇಕೆಂದು ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಅಡಕೆ ಕ್ಯಾನ್ಸರ್‌ಕಾರಕ ಎಂದು ಶ್ರೀಲಂಕಾದಲ್ಲಿ ನಡೆದ ಸಮಾವೇಶದಲ್ಲಿ ವಿಶ್ವಸಂಸ್ಥೆ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಎಲ್ಲ ಕಡೆ ಚರ್ಚೆ ನಡೆಯುತ್ತಿದೆ. ಕೇವಲ ಅಡಿಕೆ ಯಿಂದ ಕ್ಯಾನ್ಸರ್ ಬರುವುದಿಲ್ಲ. ಇದರ ಜೊತೆಗೆ ತಂಬಾಕು ಸೇರಿಸಿ ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂದು ನಾವೂ ಸಹ ಒತ್ತಿ ಒತ್ತಿ ಹೇಳುತ್ತಿದ್ದೇವೆ. ಅದರೆ ವಿಶ್ವಸಂಸ್ಥೆ ಅಡಿಕೆಯನ್ನು ಪರೀಕ್ಷೆಗೆ ಒಳಪಡಿಸಿ ಪ್ರಯೋಗಾಲಯದ ವರದಿ ಕೇಳುತ್ತಿದೆ ಎಂದರು.

ಅಡಕೆ ಬಗ್ಗೆ ಸಂಶೋಧನೆಗೆ ಅನುದಾನ ಕಡಿಮೆ ಇದೆ. ಹಾಗಾಗಿ ಅಡಿಕೆ ಬಗ್ಗೆ ಹೆಚ್ಚಿನ ಸಂಶೋಧನೆಗೆ ಅನುದಾನ ಹೆಚ್ಚು ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಹಿಂದಿನ ಸಂಶೋಧನಾ ವರದಿಯನ್ನು 7 ವರ್ಷವಾದರೂ ನೀಡಲು ಸಾಧ್ಯವಾಗಿಲ್ಲ. ಇದೀಗ ರೈತರ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಂಡು ವರದಿಯನ್ನು ಶೀಘ್ರವಾಗಿ ನೀಡಿದರೆ ಅಡಿಕೆ ಕ್ಯಾನ್ಸರ್ ಕಾರಕ ಎನ್ನುವುದನ್ನು ಅಭಿಪ್ರಾಯವನ್ನು ತಡೆದು. ಇದರ ಬದಲು ಅಡಿಕೆ ಜೊತೆಗೆ ತಂಬಾಕು ಹಾಕಿದರೆ ಮಾತ್ರ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎನ್ನುವುದನ್ನು ದೃಢಪಡಿಸಿದರೆ ಆಗ ಅಡಕೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ ಮಾತನಾಡಿ, ಅಡಕೆ ದರ ಹೆಚ್ಚಳವಾದಾಗಲೆಲ್ಲ ಅಡಕೆ ವ್ಯಾಪಾರಿಗಳು ಇಲ್ಲದ ಪುಕಾರುಗಳನ್ನು ಹಬ್ಬಿಸಿ ದರ ಕುಸಿಯುವಂತೆ ಮಾಡುತ್ತಿದ್ದಾರೆ. ಶತಮಾನಗಳಿಂದಲೂ ದೇಶದ ಜನ ಅಡಿಕೆಯನ್ನು ಬಳಸುತ್ತಿದ್ದಾರೆ. ಆದರೆ ಇದುವರೆಗೂ ಅಡಿಕೆಯಿಂದ ಕ್ಯಾನ್ಸರ್ ಬರುತ್ತದೆ ಎಂದು ಯಾವ ಸಂಶೋಧನೆಗಳಿಂದಲೂ ದೃಢಪಟ್ಟಿಲ್ಲ. ಆದ್ದರಿಂದ ಲೋಕಸಭಾ ಸದಸ್ಯರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸದರಿ ಕಟ್ಟಡ ನಿರ್ಮಾಣಕ್ಕೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್ ಸಾಕಷ್ಟು ಶ್ರಮಿಸಿದ್ದಾರೆ. ಲೋಕಸಭಾ ಸದಸ್ಯರು, ಕೆ.ಎಸ್.ಬಸವಂತಪ್ಪ ಅವರ ಶಾಸಕರ ನಿಧಿ ಸೇರಿದಂತೆ 90 ಲಕ್ಷ ರೂ ವೆಚ್ಚದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕುಗಳು ರೈತರಿಗೆ ಹೆಚ್ಚು ಸಾಲ ಸೌಲಭ್ಯ ನೀಡಿದರೆ ಅನುಕೂಲವಾಗಲಿದೆ. ಇದಕ್ಕೆ ನಬಾರ್ಡ್ ಹಣಕಾಸು ನೆರವಿನ ಅಗತ್ಯವಿದೆ ಎಂದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಶೀಘ್ರವೇ ಬಗರ್‌ಹುಕುಂ ಸಮಿತಿಗಳನ್ನು ರಚಿಸಿ ಅರ್ಹ ಭೂ ರಹಿತರನ್ನು ಗುರುತಿಸಿ ಸಾಗುವಳಿ ಪತ್ರ ವಿತರಣೆ ಮಾಡಲಾಗುವುದು. ಸಾಗುವಳಿ ಪತ್ರಗಳನ್ನು ಕೊಡಿಸುವುದಾಗಿ ಕೆಲ ಏಜೆಂಟರು ಬಡ ರೈತರಿಂದ 2 ರಿಂದ 5 ಲಕ್ಷ ರೂ ತನಕ ಹಣ ಪಡೆಯುತ್ತಿರುವ ದೂರುಗಳು ಕೇಳಿ ಬಂದಿವೆ. ಯಾರೂ ಕೂಡ ಏಜೆಂಟರುಗಳಿಗೆ ಹಣ ನೀಡಬಾರದು ಎಂದು ಹೇಳಿದರು.

ರೈತ ಮುಖಂಡ ತೇಜಸ್ವಿ ವಿ.ಪಟೇಲ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಜಿ.ಮಹೇಶ್ವರಪ್ಪ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಕೆ.ಬಸಪ್ಪ, ಗ್ರಾಪಂ ಅಧ್ಯಕ್ಷ ಕಿರಣ್ ಕುಮಾರ್ ಇತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM1 Min Read

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM1 Min Read

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM1 Min Read
Recent News

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

ಎಜಿಆರ್, ಆದಾಯದಲ್ಲಿ ಶೇ 43ರಷ್ಟು ಪಾಲಿನೊಂದಿಗೆ ಬಲವಾದ ಬೆಳವಣಿಗೆಯೊಂದಿಗೆ ಜಿಯೋ ಮುಂಚೂಣಿಯಲ್ಲಿ

26/02/2026 5:43 PM

ಅಡುಗೆ ಮನೆಯ ‘ಶುಂಠಿ’ ಕೇವಲ ಸಾಂಬಾರ ಪದಾರ್ಥವಲ್ಲ, ಇದು ಸರ್ವರೋಗ ನಿವಾರಕ! | Ginger Health Benefits

26/02/2026 5:35 PM

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: 2,551 ನರ್ಸಿಂಗ್ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

26/02/2026 5:32 PM
State News
KARNATAKA

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

By kannadanewsnow0926/02/2026 5:47 PM KARNATAKA 1 Min Read

ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ…

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ: ಶಾಸಕರೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ್ ಖಂಡ್ರೆ

26/02/2026 5:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.