Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನ ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಡವರ ಮನೆ ನಿರ್ಮಾಣದ ಮೇಲಿನ ಶೇ.18ರಷ್ಟು GST ರದ್ದತಿಗೆ ಪ್ರಧಾನಿ ಮೋದಿಗೆ ಮನವಿ: ಟಿ.ಬಿ.ಜಯಚಂದ್ರ
KARNATAKA

ಬಡವರ ಮನೆ ನಿರ್ಮಾಣದ ಮೇಲಿನ ಶೇ.18ರಷ್ಟು GST ರದ್ದತಿಗೆ ಪ್ರಧಾನಿ ಮೋದಿಗೆ ಮನವಿ: ಟಿ.ಬಿ.ಜಯಚಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದರು.

ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ , ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೀಗೆ ಹೇಳಿದರು.

ಶೇಕಡಾ 18ರಷ್ಟು ಜಿ.ಎಸ್.ಟಿ.ಯಿಂದಾಗಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳು ತಲಾ ಒಂದೂವರೆ ಲಕ್ಷ ರೂಪಾಯಿ ಪಾವತಿಸಬೇಕಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಹೊರೆಯಾಗಿ ಪರಿಣಾಮಿಸಿದ್ದು, ಅಧಿಕ ಹಣ ಪಾವತಿ ಸಾಧ್ಯವಾಗುತ್ತಿಲ್ಲ ಹೀಗಾಗಿ ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಜಿ.ಎಸ್.ಟಿ. ತೆರಿಗೆ ರದ್ದುಗೊಳಿಸಬೇಕಾದ ತುರ್ತು ಅಗತ್ಯವಿರುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿದೆ ಎಂದು ಸಚಿವ ಜಮೀರ್ ಅವರು ಸಭೆಯಲ್ಲಿ ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಯಚಂದ್ರ ಅವರು, ಈ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ಇಡೀ ದೇಶದ ಬಡ ಜನತೆಗೆ ಅನುಕೂಲವಾಗುವಂತಹ ನಿರ್ಧಾರ ತೆಗೆದುಕೊಳ್ಳುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

ರಾಜ್ಯದಲ್ಲಿ ಒಟ್ಟು 2865 ಕೊಳೆಗೇರಿಗಳಿದ್ದು, ಆ ಪೈಕಿ 635 ಕೊಳಗೇರಿಗಳು ಬೆಂಗಳೂರಿನಲ್ಲಿ ಇವೆ. ಕೊಳೆಗೇರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರಕ್ಕೆ 3,682 ಕೋಟಿ ಹಣ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಈ ಬಗ್ಗೆ ಕೇಂದ್ರ ವಸತಿ ಹಾಗೂ ಕೊಳೆಗೇರಿ ಮಂಡಳಿ ಸಚಿವರ ಗಮನ ಸೆಳೆಯಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ 45,124 ಮನೆ ನಿರ್ಮಿಸುವ ಗುರಿಯಿದ್ದು, ಇದರಲ್ಲಿ 8287 ಮನೆಗಳ ನಿರ್ಮಾಣ ಮುಗಿದಿದೆ. ಇನ್ನು, 31,626 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಈ ಯೋಜನೆಯಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಸಂಪರ್ಕ ವಿದ್ಯುತ್ ಸಂಪರ್ಕ, ಒಳಚರಂಡಿ ಹಾಗೂ ಎಸ್.ಟಿ.ಪಿ. ಒದಗಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ನಿರ್ಮಾಣಗೊಂಡಿರುವ ಮನೆಗಳಿಗೆ ಫಲಾನುಭವಿಗಳು ಹೋಗುತ್ತಿಲ್ಲ ಎಂಬ ಬಗ್ಗೆ ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಯೋಜನೆಗಳ ಚರ್ಚೆ ವೇಳೆ ಗಮನಕ್ಕೆ ತರಲಾಯಿತು.

ಈ ಯೋಜನೆಗೆ ವಿಶೇಷವಾಗಿ ಈ ಮೇಲ್ಕಂಡ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರ ರೂ. 660 ಕೋಟಿ ಹಣ ಬಿಡುಗಡೆ ಮಾಡಬೇಕೆಂದು ದೆಹಲಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವಂತೆ ಗಮನಹರಿಸಬೇಕಿದೆ ಎಂದು ಸಭೆ ಅಭಿಪ್ರಾಯಪಟ್ಟಿತು.

ರಾಜ್ಯದೆಲ್ಲೆಡೆ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿಗೆ ಜಿಲ್ಲಾ ಹಾಗೂ ತಾಲ್ಲೂಕುವಾರು 171 ಹೊಸ ಪ್ರಸ್ತಾವನೆಗಳನ್ನ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದಕ್ಕಾಗಿ 60: 40 ಹಂಚಿಕೆ ಸೂತ್ರದಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದರೆ ಅಲ್ಪಸಂಖ್ಯಾತರ ಕಾಲೊನಿಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಇದೆ ವೇಳೆ ಜಮೀರ್ ಅವರು ತಿಳಿಸಿದರು.

ಕೇಂದ್ರ ನಗರಾಭಿವೃದ್ಧಿ, ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಸಚಿವರುಗಳನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತಾವನೆಗಳಿಗೆ ಅನುಮತಿ ದೊರಕಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮ ವಹಿಸುವುದಾಗಿ ಜಯಚಂದ್ರ ಹೇಳಿದರು.

BIG NEWS: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಕೊಲೆಗೈದಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ವರ್ಷದ ಕೊನೇ ದಿನವೂ ಬಿಬಿಎಂಪಿಯಿಂದ ಪಾದಚಾರಿ ಮಾರ್ಗ, ಫ್ಲೆಕ್ಸ್ ಬ್ಯಾನರ್ ಭರ್ಜರಿ ತೆರವು ಕಾರ್ಯಾಚರಣೆ

Share. Facebook Twitter LinkedIn WhatsApp Email

Related Posts

DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನ ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

2 Mins Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

2 Mins Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read
Recent News

DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನ ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

State News
KARNATAKA

DK Shivakumar Tattoo: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪ್ಪಟ ಅಭಿಮಾನಿ: ತನ್ನ ಕೈ ಭುಜದ ಮೇಲೆ ‘ಡಿಕೆಶಿ ಭಾವಚಿತ್ರ ಟ್ಯಾಟೋ’

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಾಜಕೀಯ ನಾಯಕರನ್ನು ಇಷ್ಟಪಡುವ, ಆರಾಧಿಸುವ ಅಭಿಮಾನಿಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ಶಿವಮೊಗ್ಗ ಜಿಲ್ಲೆಯ ಸಾಗರದ ನಾಗರಾಜ್ ಗುಡ್ಡೇಮನೆ…

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

BIG BREAKING: ಇಂದೇ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಘೋಷಣೆ | DK Shivakumar Oath

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.