ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡಬೇಕು ಎಂಬ ಒತ್ತಾಯ ಮಠದ ಭಕ್ತರಿಂದಲೇ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಮಠದ ಅನುಯಾಯಿಗಳ ಸಭೆ ನಡೆಯಿತು. ಈ ವೇಳೆ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆದಿದೆ.
BIGG NEWS: ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಪಟ್ಟು; ಚೆಕ್ ಸಹಿಗೆ ಅವಕಾಶ ನಿರಾಕರಿಸಿದ ಹೈಕೋರ್ಟ್
ಮಠದಲ್ಲಿ ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಇತ್ತ, ಹೈಕೋರ್ಟ್ನಲ್ಲಿ ಚೆಕ್ಗೆ ಸಹಿ ಹಾಕುವ ಅಧಿಕಾರ ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ನಡೆಯಿತು. ಆದರೆ ಹೈಕೋರ್ಟ್ ಕೆಲವು ಪ್ರಶ್ನೆಗಳನ್ನು ಕೇಳಿ ಸಹಿ ಹಾಕಲು ಅನುಮತಿಯನ್ನು ತಾತ್ಕಾಲಿಕವಾಗಿ ನಿರಾಕರಿಸಿತು. ಇನ್ನೊಂದು ಬೆಳವಣಿಗೆಯಲ್ಲಿ ಚಿತ್ರದುರ್ಗದ ಕಾರಾಗೃಹದಲ್ಲಿ ಮುರುಘಾ ಮಠದ ಪ್ರಭಾರ ಪೀಠಾಧ್ಯಕ್ಷ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು ಶಿವಮೂರ್ತಿ ಶರಣರನ್ನು ಭೇಟಿಯಾದರು. ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಸಹ ಈ ಗುಂಪಿನಲ್ಲಿದ್ದರು. ಈ ಭೇಟಿ ಮತ್ತು ಚರ್ಚೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.