ಚಿಕ್ಕಬಳ್ಳಾಪುರ : ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಅಗ್ನಿಶಾಮಕದಳದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಇಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಇಳಿಜಾರಿನಲ್ಲಿ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದರು. ಸ್ವಲ್ಪ ಕೂಡ ಆಯತಪ್ಪಿದರೂ ಪ್ರಪಾತಕ್ಕೆ ಬೀಳುವ ಸಾಧ್ಯತೆಯಿತ್ತು, ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಇಬ್ಬರು ಯುವಕರನ್ನು ರಕ್ಷಿಸಿದ್ದಾರೆ.
ಬೆಂಗಳೂರು ಗ್ರಾ.ಜಿಲ್ಲೆಯ ದೊಡ್ಡಬಳ್ಳಾಪುರ ಮೂಲದ ಕಾಲೇಜು ವಿದ್ಯಾರ್ಥಿಗಳಾದ ಮನೋಜ್ ಮತ್ತು ಮಂಜುನಾಥ್ ಸಿಕ್ಕಿಹಾಕಿಕೊಂಡಿದ್ದರು. ಇಬ್ಬರು ಬಿ.ಕಾಂ ವಿದ್ಯಾರ್ಥಿಗಳು ರಜೆಯಿದ್ದ ಕಾರಣ ಟ್ರಕ್ಕಿಂಗ್ ಹೋಗಿದ್ದರು. ಸದ್ಯ, ಇಬ್ಬರು ಯುವಕರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
BREAKING NEWS : ಬಳ್ಳಾರಿಯಲ್ಲಿಅಚ್ಚರಿ ಘಟನೆ : ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ