Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಧರ್ಮಾಧಾರಿತವಾದುದ್ದಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಧರ್ಮಾಧಾರಿತವಾದುದ್ದಲ್ಲ: ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ‘’ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಎಂಬುದಾಗಿ ತಿಳಿಸಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು, ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಬಿಜೆಪಿಯ ಮಿತ್ರ ಪಕ್ಷವಾದ ತೆಲುಗುದೇಶಂ ಪಕ್ಷದ ನಾಯಕರು ಮತ್ತು ಆಂದ್ರಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರೇ ಬಹಿರಂಗವಾಗಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದಿದ್ದಾರೆ.

ಮುಸ್ಲಿಂಮರಲ್ಲಿನ ಹಿಂದುಳಿಯುವಿಕೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ತಿಳಿದುಕೊಳ್ಳಲು ಬಯಸುವುದಾದರೆ ಈ ಬಗ್ಗೆಯೇ ಅಧ್ಯಯನ ಮಾಡಿರುವ ಸಾಚಾರ್ ಸಮಿತಿಯ ವರದಿಯನ್ನು ಪರಿಶೀಲಿಸುವ ಕಷ್ಟ ತೆಗೆದುಕೊಳ್ಳಬೇಕು. ಆ ವರದಿಯ ಪ್ರಕಾರ ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ಮುಸ್ಲಿಂಮರ ಪ್ರಾತಿನಿಧ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿಯೇ ತಲಾಖ್ ನಿಷೇಧ ಮಾಡಿದ್ದೇವೆ, ವಕ್ಪ್ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಒಂದೆಡೆ ತಮ್ಮನ್ನು ಮುಸ್ಲಿಂ ಸಮುದಾಯದ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು ಇನ್ನೊಂದೆಡೆ ಬಜರಂಗ ದಳದ ಕಾರ್ಯಕರ್ತನಂತೆ ಕೋಮುದ್ವೇಷವನ್ನು ಉಗುಳುತ್ತಿರುವುದು ಅವರು ಕೂತಿರುವ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ.

ವಕ್ಪ್ ಬೋರ್ಡಿನಲ್ಲಿ ಮುಸ್ಲಿಂಮೇತರರನ್ನು ಕಡ್ಡಾಯವಾಗಿ ಸದಸ್ಯರನ್ನಾಗಿ ಮಾಡುವ ತಿದ್ದುಪಡಿ ಕೋಮುದ್ವೇಷದಿಂದ ಕೂಡಿರುವುದು ಮೇಲ್ನೋಟದಲ್ಲಿಯೇ ಸಾಬೀತಾಗುತ್ತದೆ. ಇದೇ ಮಾನದಂಡವನ್ನು ಮುಂದಿನ ದಿನಗಳಲ್ಲಿ ಹಿಂದೂ ಮಠ-ಮಂದಿರಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹುಟ್ಟಿಕೊಂಡರೆ ಸಮಾಜದಲ್ಲಿ ಅನವಶ್ಯಕವಾಗಿ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವುದಿಲ್ಲವೇ? ದೇಶದ ಪ್ರಧಾನಿಯಾದವರು ಇಂತಹ ಸಂಘರ್ಷಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕೇ ಹೊರತು ಹುಟ್ಟುಹಾಕುವುದಲ್ಲ.

ಕರ್ನಾಟಕದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಂಮರಿಗೆ ನೀಡಲಾಗಿದೆ ಎನ್ನುವ ಇನ್ನೊಂದು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂತಹ ಆಧಾರ-ತಲೆಬುಡ ಇಲ್ಲದ ಆರೋಪಗಳನ್ನು ಮಾಡುವಾಗ ಪ್ರಧಾನಿಯವರು ಕನಿಷ‍್ಠ ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನವನ್ನಾದರೂ ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ. ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ಸಾಗರದ ಹಿರಿಯ ಶ್ರೇಣಿಯ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ವಿ.ಶಂಕರ್ ನೇಮಕ

ಟ್ರಾನ್ಸ್‌ಫ್ಯಾಟ್‌ ಎಂಬ ಕಣ್ಣಿಗೆ ಕಾಣದ ಮಹಾ ಮಾರಿಗೆ ಬಲಿಯಾಗುವ ಮುನ್ನ ತಪ್ಪದೇ ಈ ಎಚ್ಚರಿಕೆ ವಹಿಸಿ!

Share. Facebook Twitter LinkedIn WhatsApp Email

Related Posts

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

2 Mins Read

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

2 Mins Read

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

2 Mins Read
Recent News

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

State News
KARNATAKA

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ.…

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.