ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ – ಸಚಿವ ಡಾ.ಕೆ.ಸುಧಾಕರ್‌

ಬೆಳಗಾವಿ : ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಅದೇ ರೀತಿ ಒಕ್ಕಲಿಗರು ಕೂಡ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ ಒಕ್ಕಲಿಗರು ರಾಜ್ಯದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಅನ್ನದಾತರಾದ ಒಕ್ಕಲಿಗ ಸಮಾಜದವರು ನ್ಯಾಯಯುತವಾದ ಬೇಡಿಕೆಯನ್ನೇ ಇಟ್ಟಿದ್ದಾರೆ ಎಂದರು. … Continue reading ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ, ಮುಖ್ಯಮಂತ್ರಿಗಳ ಬಳಿ ಚರ್ಚೆ – ಸಚಿವ ಡಾ.ಕೆ.ಸುಧಾಕರ್‌