ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರ ಡೀಲ್ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕೇಳಿರುವಂತ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೇ ವೀಡಿಯೋ ವೈರಲ್ ಬೆನ್ನಲ್ಲೇ ರಾಜೀನಾಮೆ ಕೊಟ್ಟು ಹೋಗ್ತಾ ಇರುವ ಎಂಬುದಾಗಿ ವಾರ್ನಿಂಗ್ ಮಾಡಿರುವುದಾಗಿ ಹೇಳಲಾಗುತ್ತಿದೆ.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಡೀಲ್ ಗಾಗಿ ನಡೆಸಿದಂತ ವೀಡಿಯೋ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ವೈರಲ್ ವೀಡಿಯೋಗೆ ವಿವರಣೆ ಕೊಡೋದಕ್ಕೆ ಸಿಎಂ ಸಿದ್ಧರಾಮಯ್ಯ ಅವರಿಗೆ ರವಿಕುಮಾರ್ ಮುಂದಾಗಿದ್ದರು. ಆದರೇ ಅವರ ವಿವರಣೆ ಕೇಳದೇ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಟ್ಟು ಹೋಗುವ ಎಂಬುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.
ಅಂದಹಾಗೇ ಭೋವಿ ಸಮುದಾಯದ ಮುಖಂಡ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಡೀಲ್ ವೀಡಿಯೋ ಬಿಡುಗಡೆ ಮಾಡಿದ್ದರು. ಬಿಡುಗಡೆಯಾದಂತ ವೀಡಿಯೋದಲ್ಲಿ ಫಲಾನುಭವಿಗಳಿಂದ ಪರ್ಸೆಂಟೇಜ್ ಗಾಗಿ ಡಿಮ್ಯಾಂಡ್ ಅನ್ನು ಅಧ್ಯಕ್ಷ ರವಿಕುಮಾರ್ ಮಾಡಿದ್ದು ಕಂಡು ಬಂದಿತ್ತು.
BREAKING: ಮತ್ತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ED ಅಧಿಕಾರಿಗಳ ದಾಳಿ
ಶಿವಮೊಗ್ಗ: ಸಾಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಒತ್ತಾಯಿಸಿ ಪ್ರತಿಭಟನೆ, ಮನವಿ