ಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
(ನ.16) ಇಂದಿನಿಂದ ನ.19 ರ ಮಧ್ಯರಾತ್ರಿವರೆಗೆ ಬಾಗಲಕೋಟೆ ಜಿಲ್ಲೆಯಾದ್ಯಂತ ಇಂದಿನಿಂದ ನಾಲ್ಕು ದಿನ ಮದ್ಯ ಮಾರಾಟ ನಿಷೇಧ ಮಾಡಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಗಲಕೋಟೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು ಬಾಗಲಕೋಟೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್ ಆದೇಶಿಸಿದ್ದಾರೆ.
ಇನ್ನೂ, ಬಾಗಲಕೋಟೆ ಜಿಲ್ಲಾದ್ಯಂತ ಇಂದಿನಿಂದ ನವೆಂಬರ್ 19 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಇಂದು ಮುಧೋಳ ನಗರ ಬಂದ್ ಗೆ ಕೂಡ ಕರೆ ನೀಡಲಾಗಿತ್ತು.
ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.ಬಸ್ ಸಂಚಾರ ಸ್ಥಗಿತಗೊಂಡಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
BREAKING NEWS: ಶ್ರೀರಂಗಪಟ್ಟಣದ ಮದರಸಾ ತೆರವುಗೊಳಿಸಿ, ದೇಗುಲವಾಗಿ ಸಂರಕ್ಷಿಸಲು ಹೈಕೋರ್ಟ್ ಗೆ ಪಿಐಎಲ್
BREAKING: ಮುಂದಿನ ವಾರ, ಅಡಕೆ ಬೆಳೆ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ರಾಜ್ಯಕ್ಕೆ ಆಗಮನ