ಮಂಡ್ಯ: ವಿಶ್ವವಿಖ್ಯಾತ KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆ ಜನರಲ್ಲಿ ಆತಂಕ ಮನೆ ಮಾಡಿದೆ.
ಇದೀಗ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿದ್ದು, . ಮುನ್ನೆಚ್ಚರಿಕೆ ಹಿನ್ನೆಲೆ ಬೃಂದಾವನಕ್ಕೆ ಪ್ರವಾಸಿಗರ ನಿಷೇಧವನ್ನು ಮುಂದುವರೆಸಿದೆ. ನಾರ್ತ್ಬ್ಯಾಂಕ್ ಬಳಿ ಬೆಳೆದುನಿಂತಿದ್ದ ಗಿಡ-ಗಂಟೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.
ಕೆಆರ್ ಎಸ್ ನಲ್ಲಿ ಚಿರತೆ ಬಂದಿರುವುದು ಗೊತ್ತಾಗಿದ್ದು, ಪ್ರವಾಸಿಗರಿಗೆ ಆತಂಕ ಶುರುವಾಗಿದೆ. ಸತತವಾಗಿ ಮೂರನೇ ಬಾರಿಗೆ ಬೃಂದಾವನದಲ್ಲಿ ಚಿರತೆ ಕಾಣಸಿಕೊಂಡಿದೆ. ಬೃಂದಾವನದಲ್ಲಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು. ಆದರೆ ಇದುವರೆಗೂ ಚಿರತೆ ಸೆರೆಯಾಗಿಲ್ಲ. ಕಳೆದ ನಾಲ್ಕು ದಿನಗಳಿಂದಲೂ ‘KRS’ ನಲ್ಲಿ ಚಿರತೆ ಸೆರೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಅಕ್ಟೋಬರ್ 28ರಂದು ಪ್ರತ್ಯಕ್ಷವಾಗಿದ್ದ ಚಿರತೆ ಇದುವರೆಗೂ ಎಲ್ಲಿಯೂ ಸಹ ಕಾಣಿಸಿಕೊಂಡಿಲ್ಲ.
BREAKING NEWS : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಟೀಚರ್ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!